ಖಮ್ಮಂ:ಹೈದ್ರಾಬಾದ್ನಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದ ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿ ಪದವೀಧರ ವಿದ್ಯಾರ್ಥಿಯೊಬ್ಬ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ ನಡೆದಿದೆ.
ಪಶುವೈದ್ಯೆ ಮೇಲೆ ಪೈಶಾಚಿಕ ಕೃತ್ಯ: ಮರಣದಂಡನೆಗೆ ಒತ್ತಾಯಿಸಿ ವಿದ್ಯಾರ್ಥಿಯಿಂದ ಆತ್ಮಹತ್ಯೆ ಬೆದರಿಕೆ - ತೆಲಂಗಾಣದ ಖಮ್ಮಂ ಸುದ್ದಿ
ತೆಲಂಗಾಣದ ಈ ವಿದ್ಯಾರ್ಥಿಯೊಬ್ಬ ಕಟ್ಟಡವೊಂದನ್ನು ಏರಿ ನಿಂತು, ಪಶುವೈದ್ಯೆಯ ರೇಪ್ & ಮರ್ಡರ್ ಕೇಸ್ ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿ, ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ.
ವಿದ್ಯಾರ್ಥಿಯಿಂದ ಆತ್ಮಹತ್ಯೆ ಬೆದರಿಕೆ
26 ವರ್ಷದ ಪಶುವೈದ್ಯಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ, ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ದೇಶದೆಲ್ಲೆಡೆ ಪ್ರತಿಭಟನೆ ನಡೆಸಿ ಜನರು ಆಕ್ರೋಶ ಹೊರಹಾಕುತ್ತಿದ್ದಾರೆ. ತೆಲಂಗಾಣದ ಈ ವಿದ್ಯಾರ್ಥಿಯೊಬ್ಬ ಕಟ್ಟಡವೊಂದನ್ನು ಏರಿ ನಿಂತು, ಪ್ರಕರಣದ ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಒತ್ತಾಯಿಸಿ, ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾನೆ.
ಸ್ಥಳಕ್ಕಾಗಮಿಸಿದ ಪೊಲೀಸರು ಹರಸಾಹಸ ಪಟ್ಟು ಆತನನ್ನು ರಕ್ಷಿಸಿ, ಬುದ್ಧಿವಾದ ಹೇಳಿ, ಬಳಿಕ ಆತನನ್ನು ಪೋಷಕರಿಗೆ ಒಪ್ಪಿಸಿದ್ದಾರೆ.
TAGGED:
ತೆಲಂಗಾಣದ ಖಮ್ಮಂ ಸುದ್ದಿ