ಕರ್ನಾಟಕ

karnataka

ETV Bharat / bharat

ಜೆಇಇ, ನೀಟ್ ಪರೀಕ್ಷೆ ಮುಂದೂಡಿಕೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ - ಉಪವಾಸ ಸತ್ಯಾಗ್ರಹ

ನೀಟ್, ಯುಜಿಸಿ - ನೆಟ್, ಕ್ಲಾಟ್, ಮತ್ತು ಜೆಇಇ ಪರೀಕ್ಷೆ ಮುಂದೂಡಬೇಕು. ಸಿಬಿಎಸ್‌ಇ 10 ಮತ್ತು 12 ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿ 4,200 ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ದಿನವಿಡೀ ಉಪವಾಸ ಸತ್ಯಾಗ್ರಹ ಆಚರಿಸಿದ್ದಾರೆ ಎಂದು ಅಖಿಲ ಭಾರತ ವಿದ್ಯಾರ್ಥಿ ಸಂಘ ಹೇಳಿದೆ.

ಜೆಇಇ,ನೀಟ್ ಪರೀಕ್ಷೆ ಮುಂದೂಡಿಕೆಗೆ ಆಗ್ರಹ
ಜೆಇಇ,ನೀಟ್ ಪರೀಕ್ಷೆ ಮುಂದೂಡಿಕೆಗೆ ಆಗ್ರಹ

By

Published : Aug 26, 2020, 2:39 PM IST

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ನೀಟ್​ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿ ಸುಮಾರು 4,000 ವಿದ್ಯಾರ್ಥಿಗಳು ದಿನವಿಡೀ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ ಎಂದು ಮಾಧ್ಯಮ ವರದಿ ಬಹಿರಂಗಗೊಳಿಸಿದೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಆಲಿಸಿ, ಅದಕ್ಕೆ ಪರಿಹಾರದೊಂದಿಗೆ ಆಗಮಿಸುವಂತೆ ಸರ್ಕಾರವನ್ನು ಒತ್ತಾಯಿಸಿದ ದಿನವೇ ಉಪವಾಸ ಸತ್ಯಾಗ್ರಹದ ಘೋಷಣೆ ಮಾಡಲಾಗಿದೆ.

ನೀಟ್, ಯುಜಿಸಿ-ನೆಟ್, ಕ್ಲಾಟ್, ಮತ್ತು ಜೆಇಇ ಪರೀಕ್ಷೆ ಮುಂದೂಡಬೇಕು. ಸಿಬಿಎಸ್‌ಇ 10 ಮತ್ತು 12 ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿ 4,200 ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ದಿನವಿಡೀ ಉಪವಾಸ ಸತ್ಯಾಗ್ರಹವನ್ನು ಆಚರಿಸಿದ್ದಾರೆ ಎಂದು ಅಖಿಲ ಭಾರತ ವಿದ್ಯಾರ್ಥಿ ಸಂಘ ಹೇಳಿದೆ.

ವಿದ್ಯಾರ್ಥಿಗಳ ಬೇಡಿಕೆಗಳಿಗೆ ಕಿವಿಗೊಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಲು ಸೋಷಿಯಲ್ ಮೀಡಿಯಾವನ್ನು ಉಪಯೋಗಿಸಿಕೊಂಡಿದ್ದಾರೆ. "ಜೆಇಇ ಪರೀಕ್ಷಾ ಕೇಂದ್ರಕ್ಕೆ ಬೆಳಗ್ಗೆ 7 ಗಂಟೆಗೆ ತಲುಪಬೇಕು. ನಾನು ಇರುವ ಸ್ಥಳದಿಂದ ಪರೀಕ್ಷಾ ಕೇಂದ್ರವು 150 ಕಿಲೋಮೀಟರ್ ದೂರದಲ್ಲಿದೆ. ಸಾರ್ವಜನಿಕ ಸಾರಿಗೆ ರೈಲುಗಳು ಅಥವಾ ಬಸ್​​​​ಗಳು ಲಭ್ಯವಿಲ್ಲ. ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವುದು ಹೇಗೆ. ಮಾಸ್ಕ್​ ಧರಿಸಿಕೊಂಡು ನಿರಂತರವಾಗಿ ಪರೀಕ್ಷೆ ಬರೆಯುವುದು ಹೇಗೆ" ಎಂದು ವಿದ್ಯಾರ್ಥಿಯೊಬ್ಬರು ಪ್ರಶ್ನಿಸಿದ್ದಾರೆ.

ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವಾಗ ಸೋಂಕು ತಗುಲಿದರೆ ಏನು ಮಾಡುವುದು ಎಂಬ ಆತಂಕ ವಿದ್ಯಾರ್ಥಿಗಳು ವ್ಯಕ್ತಪಡಿದ್ದಾರೆ. ಕೆಲವು ಪರೀಕ್ಷಾ ಕೇಂದ್ರಗಳು ಕೊರೊನಾ ಹಾಟ್‌ಸ್ಪಾಟ್‌ಗಳಲ್ಲಿವೆ. ಇದರಿಂದ ನಮಗೆ ಸಮಸ್ಯೆಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಪರ್ಯಾಯ ಪ್ರವೇಶ ವಿಧಾನ ಕಲ್ಪಿಸುವಂತೆ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಕೇಂದ್ರಕ್ಕೆ ಮನವಿ ಮಾಡಿದ್ದರು. ಜೆಇಇ ಮತ್ತು ನೀಟ್ 2020 ಪರೀಕ್ಷೆಗಳನ್ನು ಸೆಪ್ಟೆಂಬರ್​ನಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಯುಜಿಸಿ ನೆಟ್ 2020ರ ಪರೀಕ್ಷಾ ವೇಳಾಪಟ್ಟಿಗೆ ಸಂಬಂಧಿಸಿದಂತೆ ದೇಶದ ವಿವಿಧ ಕೇಂದ್ರ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಪತ್ರ ಬರೆದಿದ್ದಾರೆ.

ABOUT THE AUTHOR

...view details