ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ನಟ ಅಂಬರೀಶ್ ಪತ್ನಿ ಸುಮಲತಾ ಅವರು, ಇಂದು ಮುಂಜಾನೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದರು.
ಪುತ್ರ ಅಭಿಷೇಕ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಹಿತೈಷಿಗಳೊಂದಿಗೆ ತಿರುಪತಿಗೆ ಬಂದ ಸುಮಲತಾ ಅವರು ತಿಮ್ಮಪ್ಪನಿಗೆ ಕಾಣಿಕೆ ಸಲ್ಲಿಸಿದರು.