ನವದೆಹಲಿ:ಕೊರೊನಾ ಪರಿಸ್ಥಿತಿ ಎದುರಿಸುವಲ್ಲಿ ರಾಜ್ಯ ಸರ್ಕಾರಗಳು ಯಾವ ಕ್ರಮ ಕೈಗೊಂಡಿವೆ. ತೆಗೆದುಕೊಳ್ಳಬೇಕಾದ ಕ್ರಮಗಳೇನು ಮತ್ತು ಪ್ರಸ್ತುತ ಪರಿಸ್ಥಿತಿ ಯಾವ ರೀತಿಯಲ್ಲಿದೆ ಎಂಬ ಕುರಿತು ವರದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಪ್ರಸ್ತುತ ಕೊರೊನಾ ಪರಿಸ್ಥಿತಿಯ ಮಾಹಿತಿ ನೀಡುವಂತೆ ಎಲ್ಲಾ ರಾಜ್ಯಗಳಿಗೆ ಸುಪ್ರೀಂ ಸೂಚನೆ - Bench headed by Justice Ashok Bhushan
ಕೋವಿಡ್ ನಿರ್ವಹಣೆಯ ಕುರಿತು ಅಫಿಡವಿಡ್ ಸಲ್ಲಿಸುವಂತೆ ಕೆಲ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠವು ಪ್ರಸ್ತುತ ಎಲ್ಲಾ ರಾಜ್ಯಗಳ ಕೊರೊನಾ ಪರಿಸ್ಥಿತಿ ಕೋರಿ ವರದಿ ಸಲ್ಲಿಸಲು ಸೂಚಿಸಿದೆ.
ಸುಪ್ರೀಂಕೋರ್ಟ್
ಈ ಕುರಿತು ಶೀಘ್ರವೇ ಉತ್ತರಿಸುವಂತೆ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠವು ಕೋರಿದ್ದು, ದೆಹಲಿ, ಮಹಾರಾಷ್ಟ್ರ, ಗುಜರಾತ್ ಮತ್ತು ಅಸ್ಸೋಂ ಸರ್ಕಾರಗಳಿಂದ ಅಫಿಡವಿಟ್ ಸಲ್ಲಿಸುವಂತೆ ಕೋರಿದೆ.
ಇದಲ್ಲದೆ ಕೋವಿಡ್ ನಿರ್ವಹಣೆಯಲ್ಲಿ ಗುಜರಾತ್ ಹಾಗೂ ದೆಹಲಿ ಸರ್ಕಾರಗಳು ಕೆಟ್ಟ ಪರಿಸ್ಥಿತಿಯಲ್ಲಿವೆ ಎಂದಿದೆ.