ಕರ್ನಾಟಕ

karnataka

ETV Bharat / bharat

ಬೀದರ್​ನ ಶಾಹೀನ್​ ಶಾಲೆ ವಿರುದ್ಧ ದೇಶದ್ರೋಹ ಪ್ರಕರಣ: ಪಿಐಎಲ್ ವಜಾಗೊಳಿಸಿದ ಸುಪ್ರೀಂ

ಸಿಎಎ​ ವಿರೋಧಿಸಿ ಬೀದರ್​ನ ಶಾಹೀನ್ ಶಾಲೆಯಲ್ಲಿ ಮಕ್ಕಳು ಮಾಡಿದ್ದ ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಸಂಭಾಷಣೆ ನಡೆಸಲಾಗಿದೆ ಎಂಬ ಆರೋಪದಡಿ ಬೀದರ್​ನ ಶಾಹೀನ್​ ಶಾಲೆಯ ಆಡಳಿತ ಮಂಡಳಿ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಪಿಐಎಲ್​ ಅನ್ನು ಸುಪ್ರೀಂ ಕೋರ್ಟ್​ ತಿರಸ್ಕರಿಸಿದೆ.

Supreme Court
ಪಿಐಎಲ್ ವಜಾಗೊಳಿಸಿದ ಸುಪ್ರೀಂ

By

Published : Mar 6, 2020, 7:45 PM IST

ನವದೆಹಲಿ: ದೇಶದ್ರೋಹ ಆರೋಪದಡಿ ಕರ್ನಾಟಕದ ಬೀದರ್​ನ ಶಾಹೀನ್​ ಶಾಲೆಯ ಆಡಳಿತ ಮಂಡಳಿಯ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ರದ್ದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ.

ಸಿಎಎ, ಎನ್​ಆರ್​ಸಿ ಹಾಗೂ ಎನ್​ಪಿಆರ್​ ವಿರೋಧಿಸಿ ಬೀದರ್​ನ ಶಾಹೀನ್ ಶಾಲೆಯಲ್ಲಿ ಮಕ್ಕಳು ಮಾಡಿದ್ದ ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಸಂಭಾಷಣೆ ನಡೆಸಲಾಗಿದೆ ಎಂದು ಆರೋಪಿಸಿ ಎಬಿವಿಪಿ ಕಾರ್ಯಕರ್ತರೊಬ್ಬರು ದೂರು ನೀಡಿದ್ದರು. ಈ ಸಂಬಂಧ ದೇಶದ್ರೋಹ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಶಾಹೀನ್​​ ಸಂಸ್ಥೆಯ ಮುಖ್ಯ ಶಿಕ್ಷಕಿ ಫರೀದಾ ಬೇಗಂ ಹಾಗೂ ನಾಟಕದಲ್ಲಿ ಪಾತ್ರ ಮಾಡಿದ್ದ ವಿದ್ಯಾರ್ಥಿನಿಯ ತಾಯಿ ನಬಿದಾ ಬೇಗಂ ಅವರನ್ನು ಬಂಧಿಸಿದ್ದರು.

ಶಾಲೆಯ ಆಡಳಿತ ಮಂಡಳಿಯ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ ಅನ್ನು ರದ್ದುಗೊಳಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತೆ ಯೋಗಿತಾ ಭಯಾನ, ಸುಪ್ರೀಂಕೋರ್ಟ್​ಗೆ ಪಿಐಎಲ್​ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿರುವ ನ್ಯಾಯಾಲಯವು, ಅರ್ಜಿಯನ್ನು ತಿರಸ್ಕರಿಸಿದೆ.

ABOUT THE AUTHOR

...view details