ನವದೆಹಲಿ:ಮಹಾಮಾರಿ ಕೊರೊನಾ ವೈರಸ್ ಹಾವಳಿ ಕಾರಣ ದೇಶದಲ್ಲಿ ನಡೆಸಲು ನಿರ್ಧರಿಸಲಾಗಿರುವ ಜೆಇಇ-ನೀಟ್ ಪರೀಕ್ಷೆ ಮುಂದೂಡುವಂತೆ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಂಡಿದೆ. ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ನಿಂದ ಮಹತ್ವದ ಆದೇಶ ಹೊರಬಿದ್ದಿದೆ.
ಕೊರೊನಾ ವೈರಸ್ ಕಾರಣ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಈ ಪರೀಕ್ಷೆ ಮೂಂದೂಡಿಕೆ ಮಾಡುವಂತೆ ಬಿಜೆಪಿಯೇತರ ರಾಜ್ಯಗಳಿಂದ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿತ್ತು. ಪಶ್ಚಿಮ ಬಂಗಾಳ, ರಾಜಸ್ಥಾನ, ಪಂಜಾಬ್, ಮಹಾರಾಷ್ಟ್ರ, ಛತ್ತೀಸ್ಗಢ ಮತ್ತು ಜಾರ್ಖಂಡ್ ರಾಜ್ಯ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದವು. ಆದರೆ ಇದೀಗ ಅದು ವಜಾಗೊಂಡಿದೆ. ಹೀಗಾಗಿ ಬಿಜೆಪಿಯೇತರ ಸರ್ಕಾರಗಳಿಗೆ ಮತ್ತೊಮ್ಮೆ ಮುಖಭಂಗವಾಗಿದೆ. ಜತೆಗೆ ಈಗಾಗಲೇ ನಿರ್ಧಾರಗೊಂಡಿರುವ ವೇಳಾಪಟ್ಟಿ ಪ್ರಕಾರ ಪರೀಕ್ಷೆ ನಡೆಯಲಿವೆ ಎಂದು ತಿಳಿಸಿದೆ.