ಕರ್ನಾಟಕ

karnataka

ETV Bharat / bharat

ಅಯೋಧ್ಯೆ ತೀರ್ಪು: ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್ - ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ

ಅಯೋಧ್ಯೆ ರಾಮಮಂದಿರ ಭೂ ವಿವಾದದ ಐತಿಹಾಸಿಕ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎಲ್ಲಾ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ವಜಾಗೊಳಿಸಿದೆ.

upreme Court dismisses all petitions
ಅಯೋಧ್ಯೆ ತೀರ್ಪು

By

Published : Dec 12, 2019, 5:00 PM IST

ನವದೆಹಲಿ:ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸುಪ್ರೀಂಕೋರ್ಟ್​ ನೀಡಿದ್ದ ಮಹತ್ವದ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಎಲ್ಲಾ ಮರುಪರಿಶೀಲನಾ ಅರ್ಜಿಗಳನ್ನು ಸುಪ್ರೀಂಕೋರ್ಟ್​ ಇಂದು ವಜಾಗೊಳಿಸಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ವಿವಾದಿತ 2.77 ಎಕರೆ ಭೂಮಿಯನ್ನು ಶ್ರೀರಾಮ ಮಂದಿರ ನಿರ್ಮಾಣಕ್ಕೆ ನೀಡಿ, ಮಸೀದಿ ನಿರ್ಮಾಣಕ್ಕೆ ಬೇರೆಡೆ 5 ಎಕರೆ ಜಮೀನು ನೀಡಿ ಸುಪ್ರೀಂಕೋರ್ಟ್​ ಐತಿಹಾಸಿಕ ತೀರ್ಪು ನೀಡಿತ್ತು. ಆದರೆ ಈ ತೀರ್ಪು ಪ್ರಶ್ನಿಸಿ 18 ವಿವಿಧ ಸಂಘಟನೆಗಳು ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್.​ಎ. ಬೋಬ್ಡೆ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿತು.

ಅಖಿಲ ಭಾರತ ಮುಸ್ಲೀಮರ ವೈಯಕ್ತಿಕ ಕಾನೂನು ಮಂಡಳಿ ಮತ್ತು ನಿರ್ಮೋಹಿ ಅಖಾರಾ, ಜಮಾತ್ ಉಲೇಮಾ-ಇ-ಹಿಂದ್ ಸಂಘಟನೆ, ಹಿಂದೂ ಮಹಾಸಭಾ ಸೇರಿದಂತೆ ಅನೇಕ ಸಂಘಟನೆಗಳು ತೀರ್ಪು ಮರುಪರಿಶೀಲಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದವು.

ABOUT THE AUTHOR

...view details