ನವದೆಹಲಿ:ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಓರ್ವನಾದ ಅಕ್ಷಯ್ ಕುಮಾರ್ ಸಿಂಗ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಗಲ್ಲು ಖಾಯಂ: ನಿರ್ಭಯಾ ಅಪರಾಧಿಯ ಪರಿಹಾರಾತ್ಮಕ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ - ನಿರ್ಭಯಾ ಅಪರಾಧಿ
ಫೆ.1 ರಂದು ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಚಿತವಾಗಿದ್ದು, ಅಪರಾಧಿ ಅಕ್ಷಯ್ ಕುಮಾರ್, ಗಲ್ಲು ಶಿಕ್ಷೆಗೆ ತಡೆ ಹಿಡಿಯುವಂತೆ ಕೋರಿ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿ(ಪರಿಹಾರಾತ್ಮಕ) ಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಫೆ.1 ರಂದು ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಚಿತವಾಗಿದ್ದು ಅಪರಾಧಿ ಅಕ್ಷಯ್ ಕುಮಾರ್, ಗಲ್ಲು ಶಿಕ್ಷೆಗೆ ತಡೆ ಹಿಡಿಯುವಂತೆ ಕೋರಿ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದನು. ಈ ಸಂಬಂಧ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಅರುಣ್ ಮಿಶ್ರಾ, ಆರ್. ಎಫ್.ನಾರಿಮನ್, ಆರ್.ಬಾನುಮತಿ ಹಾಗೂ ಅಶೋಕ್ ಭೂಷಣ್ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿ ತಿರಸ್ಕರಿಸಿದೆ. ನಿನ್ನೆಯಷ್ಟೇ ಪ್ರಕರಣದ ಇನ್ನೋರ್ವ ಅಪರಾಧಿ ಮುಖೇಶ್, ತಾನು ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ತಿರಸ್ಕರಿಸಿದ್ದ ರಾಷ್ಟ್ರಪತಿಗಳ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು.
ಇದೀಗ ಅಪರಾಧಿಗಳ ಗಲ್ಲುಶಿಕ್ಷೆಗೆ ತಡೆ ನೀಡುವಂತೆ ಕೋರಿ ಅಪರಾಧಿಗಳ ಪರ ವಕೀಲ ಎ.ಪಿ.ಸಿಂಗ್, ದೆಹಲಿಯ ಪಟಿಯಾಲಾ ಹೌಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.