ನವದೆಹಲಿ:ಕೊರೊನಾ ವೈರಸ್ಗೆ ಸಂಬಂಧಿಸಿದ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲು ಕ್ರಮ ಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸರ್ಕಾರ ಅಥವಾ ಆರೋಗ್ಯ ಇಲಾಖೆಯಿಂದ ಅನುಮೋದನೆಗೊಂಡ ಸರ್ಕಾರಿ ಅಥವಾ ಖಾಸಗಿ ಪ್ರಯೋಗಾಲಯಗಳಲ್ಲಿ ಕೋವಿಡ್-19ಗೆ ಸಂಬಂಧಿಸಿದ ಪರೀಕ್ಷೆಗಳು ಉಚಿತವಾಗಿರಬೇಕು. ಈ ನಿಟ್ಟಿನಲ್ಲಿ ಕೇಂದ್ರವು ತಕ್ಷಣವೇ ಅಗತ್ಯ ನಿರ್ದೇಶನಗಳನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಿದೆ.