ನವದೆಹಲಿ:ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾಂಗ್ರೆಸ್ ನಾಯಕ ಪಿ. ಚಿದಂಬರಂಗೆ ಜಾಮೀನು ಆಕ್ಷೇಪ ವ್ಯಕ್ತಪಡಿಸಿರೋ ಇಡಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಪಿ.ಚಿದಂಬರಂಗೆ ಜಾಮೀನು ಆಕ್ಷೇಪ ವಿಚಾರ: ಇಡಿಗೆ ಸುಪ್ರೀಂಕೋರ್ಟ್ ನೋಟಿಸ್ - ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣ ಸುದ್ದಿ
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾಂಗ್ರೆಸ್ ನಾಯಕ ಪಿ.ಚಿದಂಬರಂಗೆ ಜಾಮೀನು ಆಕ್ಷೇಪ ವ್ಯಕ್ತಪಡಿಸಿರುವ ವಿಚಾರವಾಗಿ, ಜಾರಿ ನಿರ್ದೇಶನಾಲಯಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಇಡಿಗೆ ಸುಪ್ರೀಂ ನೋಟಿಸ್
ಜಾಮೀನು ಕೋರಿ ಪಿ.ಚಿದಂಬರಂ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಜಾಮೀನು ನಿರಾಕರಿಸುವ ದೆಹಲಿ ಹೈಕೋರ್ಟ್ ಆದೇಶಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರ ಮನವಿ ಮೇರೆಗೆ ಕೋರ್ಟ್ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ನೋಟಿಸ್ ನೀಡಿದೆ.
ಈ ಕುರಿತ ಮುಂದಿನ ವಿಚಾರಣೆ ನವೆಂಬರ್ 26ರಂದು ನಡೆಯಲಿದೆ.