ನವದೆಹಲಿ:ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಈವರೆಗೂ 59 ಅರ್ಜಿಗಳು ದಾಖಲಾಗಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಇದೀಗ ನೋಟಿಸ್ ಜಾರಿ ಮಾಡಿದೆ.
ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ನಕಾರ... ಕೇಂದ್ರಕ್ಕೆ ಸುಪ್ರೀಂನಿಂದ ನೋಟಿಸ್ - ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕೆಲವೊಂದು ರಾಜ್ಯಗಳಲ್ಲಿ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಇದರ ಮಧ್ಯೆ ಸುಪ್ರೀಂಕೋರ್ಟ್ನಿಂದ ಕೇಂದ್ರಕ್ಕೆ ನೋಟಿಸ್ ಜಾರಿಯಾಗಿದೆ.
![ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ನಕಾರ... ಕೇಂದ್ರಕ್ಕೆ ಸುಪ್ರೀಂನಿಂದ ನೋಟಿಸ್ Supreme Court](https://etvbharatimages.akamaized.net/etvbharat/prod-images/768-512-5411006-thumbnail-3x2-wdfdf.jpg)
ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಕಾಯ್ದೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ್ದು, ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸ್ಪಂದಿಸುವಂತೆ ಕೋರಿ ನೋಟಿಸ್ ನೀಡಿದೆ. ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯನ್ಯಾಯಾಮೂರ್ತಿ ಎಸ್.ಎ ಬೋಬ್ಡೆ, ನ್ಯಾ. ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ತ್ರಿಸದಸ್ಯ ಪೀಠ, ಕಾಯ್ದೆಗೆ ತಡೆ ನೀಡಲು ಸಾಧ್ಯವಿಲ್ಲ. ಈ ಕುರಿತು ಜನವರಿ ಎರಡನೇ ವಾರದೊಳಗೆ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರಕ್ಕೆ ತಿಳಿಸಿದೆ.
ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪಾಸ್ ಆಗಿದ್ದು, ಈಗಾಗಲೇ ರಾಷ್ಟ್ರಪತಿಗಳ ಅಂಕಿತ ಸಿಕ್ಕಿರುವ ಕಾರಣ ಪೌರತ್ವ ತಿದ್ದುಪಡಿ ಮಸೂದೆ-2019 ದೇಶಾದ್ಯಂತ ಜಾರಿಯಾಗುವ ಸಾಧ್ಯತೆ ಇದೆ. ಅದರ ಮೊದಲ ಭಾಗವಾಗಿ ಪಶ್ಚಿಮ ಬಂಗಾಳದಲ್ಲಿ ಜಾರಿ ಮಾಡಲು ಕೇಂದ್ರ ಮುಂದಾಗಿದ್ದು, ಅದರ ವಿರುದ್ಧ ಮಮತಾ ಬ್ಯಾನರ್ಜಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.