ನವದೆಹಲಿ: ಮತಯಂತ್ರಗಳ ಕುರಿತಾಗಿ 21 ವಿಪಕ್ಷಗಳು ಸುಪ್ರೀಂಕೋರ್ಟ್ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಇಂದು ಸಿಜೆಐ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ.
ಮತಯಂತ್ರ ವಿವಾದ: ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್ - ಚುನಾವಣಾ ಆಯೋಗ
ಮತಯಂತ್ರಗಳ ಕುರಿತಾಗಿ ವಿಪಕ್ಷಗಳು ಮಾಡಿರುವ ಆರೋಪದ ಬಗ್ಗೆ ಚುನಾವಣಾ ಆಯೋಗ ಉತ್ತರಿಸಬೇಕೆಂದು ಸುಪ್ರೀಂಕೋರ್ಟ್ ನೋಟೀಸ್ ಜಾರಿ ಮಾಡಿದೆ
ಮತಯಂತ್ರ ಸಂಬಂಧ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ನಿಂದ ನೋಟೀಸ್
ವಿಪಕ್ಷಗಳ ಆರೋಪ ಸಂಬಂಧ ಚುನಾವಣಾ ಆಯೋಗದ ಹಿರಿಯ ಅಧಿಕಾರಿ ಉತ್ತರಿಸಬೇಕು ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ಪೀಠ ಹೇಳಿದೆ. ಹಾಗೂ ಮುಂದಿನ ವಿಚಾರಣೆಯನ್ನು ಮಾರ್ಚ್ 25ಕ್ಕೆ ಮುಂದೂಡಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅರ್ಧದಷ್ಟು ಮತ ಯಂತ್ರಗಳನ್ನು ವಿವಿಪ್ಯಾಟ್ನೊಂದಿಗೆ ಕ್ರಾಸ್ ಚೆಕ್ ಮಾಡಿ, ಆನಂತರ ಫಲಿತಾಂಶ ಘೋಷಣೆ ಮಾಡಬೇಕೆಂದು ಪ್ರತಿಪಕ್ಷಗಳು ಸುಪ್ರೀಂ ಮೆಟ್ಟಿಲೇರಿದ್ದವು. ಈ ಸಂಬಂಧ ಇಂದು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು. ಮತಯಂತ್ರಗಳ ಮೂಲಕ ಸುಲಭವಾಗಿ ಮೋಸ ಮಾಡಬಹುದು ಎಂದು ವಿಪಕ್ಷಗಳು ಆರೋಪ ಮಾಡಿದ್ದವು.