ಕರ್ನಾಟಕ

karnataka

ETV Bharat / bharat

ನಾಳೆಯೇ ವಿಶ್ವಾಸ ಮತಯಾಚನೆ ನಡೆಸುವಂತೆ ಎಂಪಿ ಸರ್ಕಾರಕ್ಕೆ ಸುಪ್ರೀಂ ಆದೇಶ

madhya pradesh government
ಮಧ್ಯ ಪ್ರದೇಶ ರಾಜಕೀಯ

By

Published : Mar 19, 2020, 6:25 PM IST

Updated : Mar 19, 2020, 7:33 PM IST

18:19 March 19

ನಾಳೆಯೇ ವಿಶ್ವಾಸ ಮತಯಾಚನೆ ನಡೆಸುವಂತೆ ಎಂಪಿ ಸರ್ಕಾರಕ್ಕೆ ಸುಪ್ರೀಂ ಆದೇಶ

ನವದೆಹಲಿ:ಮಧ್ಯ ಪ್ರದೇಶದಲ್ಲಿ ಉದ್ಭವವಾಗಿರುವ ರಾಜಕೀಯ ಬಿಕ್ಕಟ್ಟು ನಾಳೆ ಅಂತ್ಯ ಕಾಣುವ ಲಕ್ಷಣ ಕಂಡುಬಂದಿದ್ದು, ನಾಳೆಯೇ ವಿಶ್ವಾಸ ಮತಯಾಚನೆ ಮಾಡುವಂತೆ ಕಮಲ್​ ನಾಥ್​​ ನೇತೃತ್ವದ ಕಾಂಗ್ರೆಸ್​ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ಆದೇಶ ನೀಡಿದೆ.

ಕಾಂಗ್ರೆಸ್​ ಸರ್ಕಾರದ ಬುಹುಮತ ಸಾಬೀತಿಗೆ ಆಗ್ರಹಿಸಿ ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಶಿವರಾಜ್​ ಸಿಂಗ್​ ಚೌಹಾಣ್ ಹಾಗೂ ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ಆದೇಶ ಹೊರಡಿಸಿದೆ. 

ಕಳೆದ ಕೆಲದಿನಗಳ ಹಿಂದೆ ಮಧ್ಯ ಪ್ರದೇಶ ಕಾಂಗ್ರೆಸ್​ ಸರ್ಕಾರದ 22 ಶಾಸಕರು ಬಂಡಾಯವೆದ್ದು, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಎಲ್ಲಾ ಶಾಸಕರು ಬೆಂಗಳೂರಿಗೆ ಶಿಫ್ಟ್​ ಆಗಿದ್ದರು. ಪಕ್ಷದ ಪ್ರಬಲ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಅದಾಗಲೇ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಎಂಪಿ ಕಾಂಗ್ರೆಸ್​ಗೆ ದೊಡ್ಡ ಹೊಡೆತ ನೀಡಿತ್ತು.

ಮಾರ್ಚ್​ 16ರಂದು ಎಂಪಿ ವಿಧಾನಸಭೆ ಕಲಾಪ ಆರಂಭಗೊಳ್ಳುತ್ತಿದ್ದಂತೆ, ರಾಜ್ಯಪಾಲ ಲಾಲ್​ ಜಿ ಟಂಡನ್​ ಸೂಚನೆಯಂತೆ ಸಿಎಂ ಕಮಲ್​ನಾಥ್​ ವಿಶ್ವಾಸ ಮತಯಾಚನೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಕೊರೊನಾದಿಂದಾಗಿ ಸದನದ ಕಲಾಪವನ್ನು ಮುಂದೂಡಲಾಗಿತ್ತು.  

ಆ ಬಳಿಕ ಕಾಂಗ್ರೆಸ್​ ಸರ್ಕಾರದ ಬುಹುಮತ ಸಾಬೀತಿಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಶಿವರಾಜ್​ ಸಿಂಗ್​ ಚೌಹಾಣ್ ಸೇರಿದಂತೆ ಬಿಜೆಪಿ ನಾಯಕರು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದರು. 22 ಶಾಸಕರು ರಾಜೀನಾಮೆ ನೀಡಿರುವುದರಿಂದ ಕಾಂಗ್ರೆಸ್​ ಸರ್ಕಾರಕ್ಕೆ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಶಾಸಕರ ರಾಜೀನಾಮೆ ಹಿನ್ನೆಲೆ ಬಹುಮತ ಸಾಬೀತು ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟ್​ನಲ್ಲಿ ಬಿಜೆಪಿ ನಾಯಕರು ಮನವಿ​ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್​ ನಾಳೆಯೇ ಬಹುಮತ ಸಾಬೀತುಪಡಿಸುವಂತೆ ಮಧ್ಯ ಪ್ರದೇಶದ ಆಡಳಿತರೂಢ ಕಾಂಗ್ರೆಸ್​ ಸರ್ಕಾರಕ್ಕೆ ಸೂಚನೆ ನೀಡಿದೆ. ಹೀಗಾಗಿ ನಾಳೆ ಮತ್ತೆ ಮಧ್ಯ ಪ್ರದೇಶದಲ್ಲಿ ವಿಧಾನ ಸಭೆ ಕಾಲಾಪದಲ್ಲಿ ಸಿಎಂ ಕಮಲ್​ನಾಥ್​ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ.

Last Updated : Mar 19, 2020, 7:33 PM IST

ABOUT THE AUTHOR

...view details