ಕರ್ನಾಟಕ

karnataka

ETV Bharat / bharat

ಪ್ರತಿಭಟಿಸುವ ಹಕ್ಕುಗಳ ಕುರಿತು ಸುಪ್ರೀಂಕೋರ್ಟ್ ಮಾರ್ಗಸೂಚಿ ಬಿಡುಗಡೆ - Supreme court on shaheen bagh

ಪ್ರತಿಭಟಿಸವುದು ಸಾಂವಿಧಾನಿಕ ಹಕ್ಕು ಮತ್ತು ಅದನ್ನು ಗೌರವಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದರೆ, ಇದರರ್ಥ ಚಳವಳಿಗಾರರು ಸ್ವಾತಂತ್ರ್ಯದ ಸಮಯದಲ್ಲಿ ಬಳಸಿದ ವಸಾಹತುಶಾಹಿ ಯುಗದ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದಲ್ಲ ಎಂದು ತಿಳಿಸಿದೆ..

NAT-HN-Supreme Court on petitions seeking guidelines on right to protest
ಪ್ರತಿಭಟಿಸುವ ಹಕ್ಕುಗಳ ಕುರಿತು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಬಿಡುಗಡೆ

By

Published : Oct 7, 2020, 4:46 PM IST

ನವದೆಹಲಿ :ಪ್ರತಿಭಟನೆಗಾಗಿ ಶಾಹೀನ್ ಬಾಗ್‌ನಂತಹ ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಳ್ಳುವುದು ಸ್ವೀಕಾರಾರ್ಹವಲ್ಲ ಮತ್ತು ಅಂತಹ ಸ್ಥಳವನ್ನು 'ಅನಿರ್ದಿಷ್ಟವಾಗಿ' ಆಕ್ರಮಿಸುವುದು ಸರಿಯಲ್ಲ ಅಂತಾ ಸುಪ್ರೀಂಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.

ನಿರ್ದಿಷ್ಟಪಡಿಸಿದ ಸ್ಥಳಗಳಲ್ಲೇ ಪ್ರತಿಭಟನೆಗಳನ್ನು ಆಯೋಜಿಸಬೇಕು. ಗೊತ್ತುಪಡಿಸಿದ ಸ್ಥಳದಲ್ಲಿ ಇಲ್ಲದೆ ಬೇರೆಡೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರೆ, ಅವುಗಳನ್ನು ತೆಗೆದು ಹಾಕುವುದು ಅಧಿಕಾರಿಗಳ ಕರ್ತವ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಪ್ರತಿಭಟಿಸವುದು ಸಾಂವಿಧಾನಿಕ ಹಕ್ಕು ಮತ್ತು ಅದನ್ನು ಗೌರವಿಸಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆದರೆ, ಇದರರ್ಥ ಚಳವಳಿಗಾರರು ಸ್ವಾತಂತ್ರ್ಯದ ಸಮಯದಲ್ಲಿ ಬಳಸಿದ ವಸಾಹತುಶಾಹಿ ಯುಗದ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದಲ್ಲ ಎಂದು ತಿಳಿಸಿದೆ.

ಕಳೆದ ಡಿಸೆಂಬರ್‌ನಲ್ಲಿ ರಾಷ್ಟ್ರ ರಾಜಧಾನಿಯ ಶಾಹೀನ್ ಬಾಗ್‌ನಲ್ಲಿ ರಸ್ತೆ ನಿರ್ಬಂಧಿಸಿ ಸಿಎಎ ವಿರೋಧಿ ಪ್ರತಿಭಟನೆಗಳ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿಯ ತೀರ್ಪು ಬಂದಿದೆ. ನ್ಯಾಯಮೂರ್ತಿ ಎಸ್ ಕೆ ಕೌಲ್ ನೇತೃತ್ವದ ನ್ಯಾಯಪೀಠವು, ಶಾಹೀನ್ ಬಾಗ್ ಪ್ರತಿಭಟನೆಯ ಸಮಯದಲ್ಲಿ ಸಾರ್ವಜನಿಕ ಸ್ಥಳಗಳನ್ನು ಅನಿರ್ದಿಷ್ಟವಾಗಿ ಆಕ್ರಮಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

ಶಾಹೀನ್ ಬಾಗ್ ಪ್ರದೇಶವನ್ನು ಪ್ರತಿಭಟನಾಕಾರರಿಂದ ತೆರವುಗೊಳಿಸಲು ದೆಹಲಿ ಪೊಲೀಸರು ಕ್ರಮ ಕೈಗೊಳ್ಳಬೇಕಿದೆ ಎಂದು ನ್ಯಾಯಪೀಠ ಆದೇಶಿಸಿದೆ.

ABOUT THE AUTHOR

...view details