ನವದೆಹಲಿ:2018ರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಸಲ್ಲಿಸಿರುವ ಅರ್ಜಿ ವಿಚಾರಣೆ ಇದೀಗ ಸುಪ್ರೀಂ ಕೋರ್ಟ್ನಲ್ಲಿ ಆರಂಭಗೊಂಡಿದೆ.ವಿಡಿಯೋ ಕಾನ್ಫರೆನ್ಸ್ ಮೂಲಕ ವಾದ-ವಿವಾದ ಆಲಿಸಲಾಗುತ್ತಿದ್ದು, ಜಸ್ಟೀಸ್ ಡಿವೈ ಚಂದ್ರಚೂಡ್ ಹಾಗೂ ಇಂದಿರಾ ಬ್ಯಾನರ್ಜಿ ವಿಚಾರಣೆ ನಡೆಸುತ್ತಿದ್ದಾರೆ.
ಸುಪ್ರೀಂನಲ್ಲಿ ಅರ್ನಬ್ ಅರ್ಜಿ ವಿಚಾರಣೆ ಆರಂಭ: ಗೋಸ್ವಾಮಿ ಪರ ಹರೀಶ್ ಸಾಳ್ವೆ ವಕಾಲತ್ತು! - 2018ರ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ
ಅರ್ನಬ್ ಗೋಸ್ವಾಮಿ ವಿರುದ್ಧದ ಕೇಸ್ನಲ್ಲಿ ಬಾಂಬೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಣೆ ಮಾಡಿದ್ದು, ಇದರ ವಿಚಾರಣೆ ಇದೀಗ ಸುಪ್ರೀಂಕೋರ್ಟ್ನಲ್ಲಿ ಆರಂಭಗೊಂಡಿದೆ.
ಇವರಿಗೆ ಮಧ್ಯಂತರ ಜಾಮೀನು ನೀಡಲು ಮುಂಬೈ ಹೈಕೋರ್ಟ್ ನಿರಾಕರಣೆ ಮಾಡಿದ್ದು, ಈ ಆದೇಶ ಪ್ರಶ್ನಿಸಿ ಅರ್ನಬ್ ಗೋಸ್ವಾಮಿ ಸುಪ್ರೀಂಕೋರ್ಟ್ ಮೇಟ್ಟಿಲೇರಿದ್ದಾರೆ. ಹಿರಿಯ ಪತ್ರಕರ್ತನ ಪರವಾಗಿ ಹರೀಶ್ ಸಾಳ್ವೆ ವಕಾಲತ್ತು ವಹಿಸಿಕೊಂಡಿದ್ದಾರೆ. ಮುಂಬೈ ಪೊಲೀಸರಿಂದ ತಮ್ಮ ಬಂಧನ ಕಾನೂನು ಬಾಹಿರವಾಗಿದ್ದು, ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಗೋಸ್ವಾಮಿ ಸುಪ್ರೀಂಗೆ ಸಲ್ಲಿಸಿರುವ ಅರ್ಜಿಯಲ್ಲಿ ಗೋಸ್ವಾಮಿ ಉಲ್ಲೇಖ ಮಾಡಿದ್ದಾರೆ.
2019 ರಲ್ಲಿ ಅಂತ್ಯ ಹಾಡಲಾಗಿದ್ದ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರ ವಿರುದ್ಧದ ಆತ್ಮಹತ್ಯೆ ಪ್ರಚೋದನೆ ನೀಡಿದ ಆರೋಪ ಪ್ರಕರಣವನ್ನು ನಾಯಕ್ ಅವರ ಪತ್ನಿ ಅಕ್ಷತಾ ಸಲ್ಲಿಸಿದ ಅರ್ಜಿ ಮೇರೆಗೆ ಮತ್ತೆ ತೆರೆಯಲಾಗಿದೆ.