ನವದೆಹಲಿ:ಮಧ್ಯಪ್ರದೇಶದ ರಾಜಕೀಯ ಬಿಕ್ಕಟ್ಟು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಕಾಂಗ್ರೆಸ್ ಸರ್ಕಾರದ ಬುಹುಮತ ಸಾಬೀತಿಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಇತರರು ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ.
22 ಶಾಸಕರು ರಾಜೀನಾಮೆ ನೀಡಿರುವುದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಶಾಸಕರ ರಾಜೀನಾಮೆ ಹಿನ್ನೆಲೆ ಬಹುಮತ ಸಾಬೀತು ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟ್ನಲ್ಲಿ ಬಿಜೆಪಿ ನಾಯಕರು ಮನವಿ ಸಲ್ಲಿಸಿದ್ದರು. ಇಂದು ಬೆಳಗ್ಗೆ ಅರ್ಜಿ ವಿಚಾರಣೆ ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಮಹತ್ವದ್ದಾಗಿದೆ.