ನವದೆಹಲಿ: ಮೋದಿ ಬಯೋಪಿಕ್ ಬಿಡುಗಡೆಗೆ ಚುನಾವಣಾ ಆಯೋಗ ನೀಡಿರುವ ತಡೆಯನ್ನು ಪ್ರಶ್ನಿಸಿ ಸಿನಿಮಾ ತಂಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ನಡೆಯಲಿದೆ.
ಸುಪ್ರೀಂನಲ್ಲಿಂದು ಅರ್ಜಿ ವಿಚಾರಣೆ: ಮೋದಿ ಬಯೋಪಿಕ್ಗೆ ಸಿಗುತ್ತಾ ಬಿಡುಗಡೆ ಭಾಗ್ಯ? - undefined
ಮೋದಿ ಬಯೋಪಿಕ್ ಬಿಡುಗಡೆಗೆ ಚುನಾವಣಾ ಆಯೋಗದಿಂದ ತಡೆ ನೀಡಿರುವ ವಿಚಾರ ಸಂಬಂಧ ಇಂದು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.
ಈ ಮೊದಲು ತಡೆಯಾಜ್ಞೆ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಸಿನಿಮಾ ರಿಲೀಸ್ ವಿಚಾರವನ್ನು ಚುನಾವಣಾ ಆಯೋಗ ನಿರ್ಧರಿಸಲಿದೆ ಎಂದು ವಿವಾದವನ್ನು ಆಯೋಗಕ್ಕೆ ಹಸ್ತಾಂತರಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಆಯೋಗ, ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಯಾವುದೇ ಬಯೋಪಿಕ್ ರಿಲೀಸ್ ಮಾಡುವಂತಿಲ್ಲ ಎಂದಿತ್ತು.
ಇದೀಗ ಆಯೋಗದ ನಿರ್ಧಾರ ಪ್ರಶ್ನಿಸಿ ಚಿತ್ರತಂಡ ಸುಪ್ರೀಂ ಕೋರ್ಟ್ ಕದ ತಟ್ಟಿದ್ದು, ಸಿಸಿಮಾ ಬಿಡುಗಡೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡುತ್ತಾ ಕಾದು ನೋಡಬೇಕು. ವಿವೇಕ್ ಒಬೇರಾಯ್ ನಟಿಸಿರುವ ಮೋದಿ ಬಯೋಪಿಕ್ ಸಿನಿಮಾವನ್ನು ಒಮಂಗ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಏಪ್ರಿಲ್ 11ರಂದು ಬಿಡುಗಡೆಯಾಗಬೇಕಿತ್ತು.