ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 7 ಮಂದಿ ಆರೋಪಿಗಳನ್ನು ಬಿಡುಗಡೆ ಮಾಡಬೇಕೆಂದು ತಮಿಳುನಾಡು ರಾಜ್ಯಪಾಲರು ಸುಪ್ರೀಂ ಕೋರ್ಟ್ಗೆ ಮನವಿ ಸಲ್ಲಿಸಿದ್ದರು. ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿದೆ. ನೀವು ಸಲ್ಲಿಸಿರುವ ಮನವಿಯಲ್ಲಿ ಯಾವುದೇ ಮಹತ್ವದ ಅಂಶವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಪೀಠ ತಿರಸ್ಕರಿಸಿದೆ.
ರಾಜೀವ್ ಗಾಂಧಿ ಹಂತಕರ ಬಿಡುಗಡೆ ಮನವಿ ತಿರಸ್ಕಾರ - etv bharat
ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 7 ಮಂದಿ ಆರೋಪಿಗಳನ್ನು ಬಿಡುಗಡೆ ಮಾಡಬೇಕೆಂದು ತಮಿಳುನಾಡು ರಾಜ್ಯಪಾಲರು ಮನವಿ ಸಲ್ಲಿಸಿದ್ದರು. ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿದೆ.
ಸುಪ್ರೀಂ ಕೋರ್ಟ್
1991 ಮೇ 21 ರಂದು ರಾಜೀವ್ ಗಾಂಧಿಯನ್ನು ಹತ್ಯೆ ಮಾಡಲಾಗಿತ್ತು. ಹತ್ಯೆಗೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಈ ಹತ್ಯೆಗೆ ಪೆರಾರಿವಲನ್, ಮುರುಘನ್, ನಳಿನಿ, ರವಿಚಂದ್ರನ್, ಜಯಕುಮಾರ್, ಮತ್ತು ರಾಬರ್ಟ್ ಸಹಾಯ ಮಾಡಿದ್ದರು. ಈ ಏಳು ಆರೋಪಿಗಳನ್ನು ಬಿಡುಗಡೆ ಮಾಡಬೇಕೆಂದು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿರುವ ಕೋರ್ಟ್ ಮನವಿಯನ್ನು ತಿರಸ್ಕರಿಸಿದೆ.