ಬರ್ಮೆರ್(ರಾಜಸ್ಥಾನ): ಅಪ್ರಾಪ್ತೆ ಬಾಲಕಿ ಹೊತ್ತೊಯ್ದು ಅತ್ಯಾಚಾರವೆಸಗಿ, ಅದರ ವಿಡಿಯೋ ಮಾಡಿದ್ದ ಕಾಮುಕನ ಬಂಧನ ಮಾಡುವಲ್ಲಿ ರಾಜಸ್ಥಾನ ಪೊಲೀಸರು ಯಶಸ್ವಿಯಾಗಿದ್ದಾರೆ. ಬರ್ಮೆರ್ ಜಿಲ್ಲೆಯ ಶಿವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.
ಇದನ್ನೂ ಓದಿ: ಮನೆಯಲ್ಲಿ ಒಂಟಿಯಾಗಿದ್ದ ಬಾಲಕಿ ಅಪಹರಿಸಿ ಅತ್ಯಾಚಾರ ಎಸಗಿದ ಕಾಮಾಂಧರು!!
ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಬಾಲಕಿಯನ್ನ ಅಪಹರಿಸಿದ್ದ ಇಬ್ಬರು ಕಾಮುಕರು ಬೈಕ್ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದರು. ಜತೆಗೆ ವಿಡಿಯೋಯನ್ನ ತಮ್ಮ ತಮ್ಮ ಮೊಬೈಲ್ಗಳಲ್ಲಿ ಸೆರೆ ಹಿಡಿದಿದ್ದರು.
ಕೃತ್ಯವೆಸಗಿದ ಬಳಿಕ ಕಾಮುಕರು ಸ್ಥಳದಿಂದ ಪರಾರಿಯಾಗಿದ್ದರು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಂತ್ರಸ್ತೆಯನ್ನು ಪೋಷಕರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಕೃತ್ಯ ನಡೆದ 24 ಗಂಟೆಯೊಳಗೆ ಶಂಕಿತ ಕಾಮುಕನ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಘಟನೆಗೆ ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ, ಬಿಜೆಪಿ ಮುಖಂಡ ಸತೀಶ್ ಪೂನಿಯಾ ಸೇರಿ ಅನೇಕರು ವಾಗ್ದಾಳಿ ನಡೆಸಿದ್ದರು.