ಕರ್ನಾಟಕ

karnataka

ETV Bharat / bharat

ಕೊರೊನಾ ಸೋಂಕಿನ ಲಕ್ಷಣ ಹೊಂದಿದ್ದ ವ್ಯಕ್ತಿ ರಿಪೋರ್ಟ್ ಬರುವ ಮೊದಲೇ ಸಾವು.. - ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದ ವ್ಯಕ್ತಿ ಸಾವು

ಕೊರೊನಾ ಸೋಂಕಿನ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಧುಮೇಹಿ ಖಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವಿಗೀಡಾಗಿದ್ದಾರೆ. ಸೋಂಕಿನ ಖಚಿತತೆ ಬಗ್ಗೆ ತಿಳಿಯಲು ವೈದ್ಯಕೀಯ ಪರೀಕ್ಷೆಗಳ ಫಲಿತಾಂಶಕ್ಕಾಗಿ ಕಾಯುತಿದ್ದೇವೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Suspected Covid-19 patient dies,ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದ ವ್ಯಕ್ತಿ ಸಾವು
ಕೊರೊನಾ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದ ವ್ಯಕ್ತಿ ಸಾವು

By

Published : Mar 8, 2020, 11:51 PM IST

ಕೋಲ್ಕತ್ತಾ(ಪಶ್ಚಿಮ ಬಂಗಾಳ):ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಆಸ್ಪತ್ರೆಯಲ್ಲಿ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಆದರೆ, ಸೌದಿ ಅರೇಬಿಯಾದಿಂದ ಹಿಂದಿರುಗಿದ ಜನಾರುಲ್ ಹಕ್ ಎಂಬ ಈತ ಕೊರೊನಾ ವೈರಸ್ ಸೋಂಕಿನ ಲಕ್ಷಣ ಕಾಣಿಸಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದ ಎಂದು ತಿಳಿದು ಬಂದಿದೆ.

ಜ್ವರ, ಕೆಮ್ಮು ಮತ್ತು ಶೀತದ ಕಾರಣದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೊರೊನಾ ಸೋಂಕಿನ ಪರೀಕ್ಷೆಗಾಗಿ ಆತನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಬಹುಶಃ ಮಧುಮೇಹದಿಂದ ಮೃತಪಟ್ಟಿರಬಹುದು ಎಂದು ಆರೋಗ್ಯ ಇಲಾಖೆ ನಿರ್ದೇಶಕ ಅಜಯ್ ಚಕ್ರವರ್ತಿ ತಿಳಿಸಿದ್ದಾರೆ.

'ಈ ವ್ಯಕ್ತಿ ಹೆಚ್ಚು ಮಧುಮೇಹ ಇತ್ತು, ಸೌದಿ ಅರೇಬಿಯಾದಿಂದ ಮನೆಗೆ ಮರಳಿದ ಮತ್ತು ಕಳೆದ ಮೂರ್ನಾಲ್ಕು ದಿನಗಳಿಂದ ಇನ್ಸುಲಿನ್ ತೆಗೆದುಕೊಳ್ಳಲು ಹಣವಿರಲಿಲ್ಲ. ಅವರು ಜ್ವರ, ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದರು. ಅವರನ್ನು ನಿನ್ನೆ ಮುರ್ಷಿದಾಬಾದ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ಗೆ ದಾಖಲಿಸಲಾಗಿತ್ತು' ಎಂದು ಮಾಹಿತಿ ನೀಡಿದ್ದಾರೆ. 'ನಾವು ವೈದ್ಯಕೀಯ ಪರೀಕ್ಷೆಗಳ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ಕೊರೊನಾ ವೈರಸ್ ಸೋಂಕಿನಿಂದಾಗಿ ಅವರ ಸಾವಿನ ಸಾಧ್ಯತೆ ಕಡಿಮೆ ಇದೆ' ಎಂದು ಹೇಳಿದ್ದಾರೆ.

'ಕೆಮ್ಮು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಈತನ ದೇಹವನ್ನು ಸ್ಪರ್ಶಿಸಲು ಕುಟುಂಬ ಸದಸ್ಯರಿಗೆ ಅನುಮತಿ ನೀಡಲಾಗುಗುವುದಿಲ್ಲ. ಅವರ ಅಂತಿಮ ವಿಧಿಗಳನ್ನು ನಿರ್ವಹಿಸುವವರಿಗೆ ರಕ್ಷಣಾತ್ಮಕ ಮುಖವಾಡಗಳು ಮತ್ತು ಕೈ ಗವಸುಗಳನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details