ನವದೆಹಲಿ:ದೇಶಾದ್ಯಂತ ಕೊರೊನಾ ಆರ್ಭಟ ಜೋರಾಗಿದ್ದು, ಇದರ ಮಧ್ಯೆ ನಾಳೆಯಿಂದ ಅನ್ಲಾಕ್ 4.0 ಜಾರಿಗೊಳ್ಳಲಿದೆ. ಆದರೆ ಅಂತಾರಾಷ್ಟ್ರೀಯ ವಿಮಾನಯಾನ ಹಾರಾಟ ಮಾತ್ರ ಸೆಪ್ಟೆಂಬರ್ 30ರವರೆಗೆ ಸ್ಥಗಿತಗೊಳ್ಳಲಿದೆ.
ಸೆಪ್ಟೆಂಬರ್ 30ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ! - international passenger flights
ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವ ಕಾರಣ ಸೆಪ್ಟೆಂಬರ್ 30ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತಗೊಳಿಸಿ ಕೇಂದ್ರ ಸರ್ಕಾರ ಮಹತ್ವದ ಆದೇಶ ಹೊರಹಾಕಿದೆ.
![ಸೆಪ್ಟೆಂಬರ್ 30ರವರೆಗೆ ಅಂತಾರಾಷ್ಟ್ರೀಯ ವಿಮಾನ ಹಾರಾಟ ಸ್ಥಗಿತ! international passenger](https://etvbharatimages.akamaized.net/etvbharat/prod-images/768-512-8625139-thumbnail-3x2-wdfdf.jpg)
ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವಾಲಯ ಪ್ರಕಟಣೆ ಹೊರಡಿಸಿದೆ. ಮಾರ್ಚ್ 23ರಿಂದಲೂ ದೇಶದಿಂದ ಬೇರೆ ಬೇರೆ ದೇಶಗಳಿಗೆ ಹಾರಾಟ ನಡೆಸುವ ವಿಮಾನ ಹಾರಾಟ ಸ್ಥಗಿತಗೊಂಡಿದ್ದು, ಇದು ಮುಂದುವರಿಯಲಿದೆ ಎಂದು ತಿಳಿದು ಬಂದಿದೆ. ಆದರೆ ಮೇ ತಿಂಗಳಿನಿಂದ 'ವಂದೇ ಭಾರತ್ ಮಿಷನ್' ಅಡಿಯಲ್ಲಿ ದೇಶದ ವಿವಿಧ ಭಾಗಗಳಿಗೆ ವಿಮಾನಯಾನ ಹಾರಾಟ ಆರಂಭಗೊಂಡಿದೆ.
ಕಳೆದ ಎರಡು ದಿನಗಳ ಹಿಂದೆ ಅನ್ಲಾಕ್ 4.0 ಮಾರ್ಗಸೂಚಿ ಕೇಂದ್ರ ಗೃಹ ಸಚಿವಾಲಯದಿಂದ ರಿಲೀಸ್ ಆಗಿದ್ದು, ಇದರ ಪ್ರಕಾರ ದೇಶದಲ್ಲಿ ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ಸೆಪ್ಟೆಂಬರ್ 30ರವರೆಗೆ ಯಾವುದೇ ಶಾಲಾ-ಕಾಲೇಜ್ ತೆರೆಯದಂತೆ ಸೂಚನೆ ನೀಡಿದೆ.