ಶ್ರೀನಗರ:ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಯ ವೇಳೆ ರಾಜ್ಯಾದ್ಯಂತ ಸುಮಾರು ಹತ್ತು ದಿನಗಳ ಕಾಲ ಇಂಟರ್ನೆಟ್ ಸೇವೆಯನ್ನು ಸಂಪೂರ್ಣ ಬಂದ್ ಮಾಡಲಾಗಿದ್ದರೂ, ಪ್ರತ್ಯೇಕತಾವಾದಿ ಸೈಯದ್ ಅಲಿ ಶಾ ಗಿಲಾನಿ ಈ ಅವಧಿಯಲ್ಲಿ ಇಂಟರ್ನೆಟ್ ಸಂಪರ್ಕ ಹೊಂದಿದ್ದರು ಎನ್ನುವ ವಿಚಾರ ತಿಳಿದು ಬಂದಿದೆ.
ಜಮ್ಮು ಕಾಶ್ಮೀರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ 370ನೇ ವಿಧಿಯನ್ನು ರದ್ದು ಮಾಡಲಾಗಿತ್ತು. ಪರಿಸ್ಥಿತಿ ಕೈಮೀರಿ ಹೋಗಬಾರದು ಎನ್ನುವ ಕಾರಣಕ್ಕೆ ಇಂಟರ್ನೆಟ್ ಸಂಪೂರ್ಣ ಬಂದ್ ಇದ್ದ ನಾಲ್ಕು ದಿನ ಗಿಲಾನಿ ಇಂಟರ್ನೆಟ್ ಬಳಸಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಎಸ್ಎನ್ಎಲ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.