ನವದೆಹಲಿ: ತಬ್ಲಿಘಿ ಜಮಾತ್ ಮುಖ್ಯಸ್ಥ, ದೆಹಲಿ ಮರ್ಕಜ್ ಕಾರ್ಯಕ್ರಮದ ಆರೋಪಿ ಮೌಲಾನಾ ಸಾದ್ ಕಂಧಲ್ವಿಗೆ ಕೊರೊನಾ ವರದಿ ನೆಗಟಿವ್ ಬಂದಿರುವುದಾಗಿ ಸಾದ್ ಪರ ವಕೀಲರೊಬ್ಬರು ಮಾಹಿತಿ ನೀಡಿದ್ದಾರೆ.
ತಬ್ಲಿಘಿ ಜಮಾತ್ ಮುಖ್ಯಸ್ಥ ಮೌಲಾನಾ ಸಾದ್ಗೆ ಕೊರೊನಾ ನೆಗಟಿವ್ - ದೆಹಲಿಯ ನಿಜಾಮುದ್ದೀನ್ನ ಮರ್ಕಜ್
ತಲೆಮರೆಸಿಕೊಂಡು ಹೋಮ್ ಕ್ವಾರಂಟೈನ್ನಲ್ಲಿರುವ ತಬ್ಲಿಘಿ ಜಮಾತ್ ಮುಖ್ಯಸ್ಥ ಮೌಲಾನಾ ಸಾದ್ಗೆ ಕೋವಿಡ್-19 ಪರೀಕ್ಷೆ ನಡೆಸಿದ್ದು, ವರದಿ ನೆಗಟಿವ್ ಬಂದಿರುವುದಾಗಿ ಸಾದ್ ಪರ ವಕೀಲರೊಬ್ಬರು ತಿಳಿಸಿದ್ದಾರೆ.
ತಲೆಮರೆಸಿಕೊಂಡು ಹೋಮ್ ಕ್ವಾರಂಟೈನ್ನಲ್ಲಿರುವ ಆರೋಪಿ ಸಾದ್ಗೆ ಕೋವಿಡ್-19 ಪರೀಕ್ಷೆ ನಡೆಸಿದ್ದು, ವರದಿ ನೆಗಟಿವ್ ಎಂದು ಬಂದಿದೆ. ಪರೀಕ್ಷಾ ವರದಿಯನ್ನು ದೆಹಲಿ ಪೊಲೀಸ್ ಅಪರಾಧ ವಿಭಾಗಕ್ಕೆ ಹಸ್ತಾಂತರಿಸಲಾಗುವುದು ಎಂದು ವಕೀಲರು ತಿಳಿಸಿದ್ದಾರೆ.
ಭಾರತದಲ್ಲಿ ತ್ವರಿತವಾಗಿ ಕೊರೊನಾ ಸೋಂಕು ಹರಡಲು ದೆಹಲಿಯ ನಿಜಾಮುದ್ದೀನ್ನ ಮರ್ಕಜ್ನಲ್ಲಿ ಮಾರ್ಚ್ನಲ್ಲಿ ದೊಡ್ಡ ಮಟ್ಟದಲ್ಲಿ ಆಯೋಜಿಸಿದ್ದ ತಬ್ಲಿಘಿ ಜಮಾತ್ ಕೂಟ ಕಾರಣವಾಗಿದೆ. ಈ ಹಿನ್ನೆಲೆ ಕೂಟವನ್ನು ಆಯೋಜಿಸಿದ್ದ ತಬ್ಲಿಘಿ ಜಮಾತ್ ಮುಖ್ಯಸ್ಥ ಮೌಲಾನಾ ಸಾದ್ ಕಂಧಲ್ವಿ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ ನಾಪತ್ತೆಯಾಗಿರುವ ಸಾದ್ಗಾಗಿ ಅಪರಾಧ ವಿಭಾಗ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹುಡುಕುತ್ತಿದ್ದಾರೆ.