ಮುಂಬೈ:ಕೊರೊನಾ ಸೋಂಕಿನಿಂದ ಬಳಲುತ್ತಿರುವ ತಬ್ಲಿಘಿ ಜಮಾತ್ ಸದಸ್ಯರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಈ ವೇಳೆ ವೈದ್ಯಕೀಯ ಸಿಬ್ಬಂದಿ ಹಾಗೂ ನರ್ಸ್ಗಳೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ, ಅವರನ್ನ ಗುಂಡಿಕ್ಕಿ ಕೊಲ್ಲಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ. ಇಂತಹ ಕ್ರೂರ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವ ಅಗತ್ಯವಿಲ್ಲ. ಬೇರೆ ಜನರಿಗೆ ನಂಬಿಕೆ ಬರಲು ಈ ವ್ಯಕ್ತಿಗಳು ಮಾಡಿರುವ ಅಸಭ್ಯ ವರ್ತನೆಯ ವಿಡಿಯೋ ರಿಲೀಸ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಬೇಕು ಎಂದಿದ್ದಾರೆ.
ತಬ್ಲಿಘಿ ಜಮಾತ್ ಸದಸ್ಯರನ್ನ ಗುಂಡಿಕ್ಕಿ ಕೊಲ್ಲಬೇಕು ಎಂದ ಠಾಕ್ರೆ ದೆಹಲಿಯಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಸಾವಿರಾರು ಜನರು ಭಾಗಿಯಾಗಿದ್ದು, ಇದರಲ್ಲಿ ಸಾವಿರಕ್ಕೂ ಅಧಿಕ ಜನರಿಗೆ ಕೊರೊನಾ ಪಾಸಿಟಿವ್ ಇರುವುದು ಕನ್ಫರ್ಮ್ ಆಗಿದೆ. ಇವರೆಲ್ಲರಿಗೂ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಉತ್ತರಪ್ರದೇಶ, ದೆಹಲಿಯಲ್ಲಿ ವೈದ್ಯರು, ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ತಬ್ಲಿಘಿ ಸದಸ್ಯರು ಯಾವುದೋ ಷಡ್ಯಂತ್ರದಲ್ಲಿ ಭಾಗಿಯಾಗಿರುವ ಅನುಮಾನ ವ್ಯಕ್ತವಾಗುತ್ತಿದ್ದು, ಅಂತಹವರನ್ನ ಗುಂಡಿಕ್ಕಿ ಕೊಲ್ಲಬೇಕು ಎಂದಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಮೊಂಬತ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ನಮೋ, ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತ ತೆಗೆದುಕೊಂಡಿರುವ ಕ್ರಮ, ಸಧ್ಯದ ಸ್ಥಿತಿ ಬಗ್ಗೆ ಮಾಹಿತಿ ನೀಡಬೇಕಾಗಿತ್ತು ಎಂದು ತಿಳಿಸಿದ್ದಾರೆ.