ಆಗ್ರಾ (ಉತ್ತರ ಪ್ರದೇಶ): ಆಗ್ರಾದಲ್ಲಿನ ಕೋವಿಡ್ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಕೊರೊನಾ ನಿಯಂತ್ರಣ ದೃಷ್ಟಿಯಿಂದ, ಐತಿಹಾಸಿಕ ಸ್ಮಾರಕಗಳಾದ ತಾಜ್ ಮಹಲ್, ಆಗ್ರಾ ಕೋಟೆ, ಅಕ್ಬರ್ ಸಮಾಧಿ ಮತ್ತು ಇತರ ಪ್ರದೇಶಗಳನ್ನ 'ಬಫರ್ ವಲಯ' ಝೋನ್ಗಳಾಗಿ ಅಲ್ಲಿನ ಜಿಲ್ಲಾಡಳಿತ ಗುರುತಿಸಿದೆ. ಹೀಗಾಗಿ ಮುಂದಿನ ಆದೇಶದವರೆಗೆ ಇವುಗಳು ಮುಚ್ಚಲ್ಪಟ್ಟಿವೆ ಎಂದು ಆಗ್ರಾದ ಡಿಸಿ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಅಬ್ಬರ: ಮತ್ತಷ್ಟು ದಿನ ತಾಜ್ಮಹಲ್ ನೋಡೋ ಭಾಗ್ಯವೂ ಬಂದ್ - coronavirus
ಕಳೆದ ನಾಲ್ಕು ದಿನಗಳಲ್ಲಿ ಈ ಜಿಲ್ಲೆಯಲ್ಲಿ 55 ಹೊಸ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ 71 ಕಂಟೇನ್ಮೆಂಟ್ ಝೋನ್ಗಳನ್ನ ಮಾಡಲಾಗಿದೆ.
ಕಳೆದ ನಾಲ್ಕು ದಿನಗಳಲ್ಲಿ ಈ ಜಿಲ್ಲೆಯಲ್ಲಿ 55 ಹೊಸ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ 71 ಕಂಟೇನ್ಮೆಂಟ್ ಝೋನ್ಗಳನ್ನ ಮಾಡಲಾಗಿದೆ. ಪ್ರವಾಸಿಗರು ಈ ಸ್ಥಳಗಳಿಗೆ ಭೇಟಿ ನೀಡಿದರೆ ಕೊರೊನಾ ವೈರಸ್ ಮತ್ತಷ್ಟು ಹರಡುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿವೆ.
ಈ ಹಿಂದೆ, ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್, ಜುಲೈ 6 ರಿಂದ ಸಂಪೂರ್ಣ ಮುನ್ನೆಚ್ಚರಿಕೆಗಳೊಂದಿಗೆ ಎಲ್ಲಾ ಸ್ಮಾರಕಗಳನ್ನು ಪುನಃ ತೆರೆಯಬಹುದಾಗಿದೆ ಎಂದು ಘೋಷಿಸಿದ್ದರು. ಆದರೆ, ಜಿಲ್ಲಾಡಳಿತ ಈಗ ಈ ನಿರ್ಧಾರದಿಂದ ಹಿಂದೆ ಸರಿದಿದ್ದು, ಕೊರೊನಾ ಕಡಿಮೆ ಆಗುವವರೆಗೂ ತಾಜ್ಮಹಲ್ ದರ್ಶನವನ್ನ ರದ್ದುಗೊಳಿಸಿದೆ.