ನವದೆಹಲಿ: ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ)ಯಲ್ಲಿ ಭಾರತ-ಚೀನಾ ಸೇನೆಗಳ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಸೇನೆ ಹಾಗೂ ರಾಜತಾಂತ್ರಿಕ ಮಟ್ಟದ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಯಾವುದೇ ಕಾರಣಕ್ಕೂ ಭಾರತ ಗೌರವಕ್ಕೆ ಧಕ್ಕೆಯಾಗದಂತೆ ಸೇನೆ ಮತ್ತು ರಾಜತಾಂತ್ರಿಕ ಮಟ್ಟದ ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತೇವೆ. ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಟಿ ಎಸ್ಪರ್ ದೂರವಾಣಿ ಕರೆ ಮಾಡಿ ಗಡಿ ವಿಚಾರವನ್ನು ಕಾರ್ಯವಿಧಾನಗಳು ಮತ್ತು ಮಾತುಕತೆಯ ಮೂಲಕ ಸಮಸ್ಯೆ ಇತ್ಯಾರ್ಥ ಪಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ಸಚಿವರು ಹೇಳಿದರು.