ಚೆನ್ನೈ: ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ ತಮಿಳುನಾಡಿನಲ್ಲಿ ಅಕ್ಟೋಬರ್ ಕೊನೆಯವರೆಗೆ ಲಾಕ್ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದ್ದು, ಇದರ ಮಧ್ಯೆ ಸಾರ್ವಜನಿಕರಿಗೆ ಮತ್ತಷ್ಟು ಸಡಿಲಿಕೆ ನೀಡಲಾಗಿದೆ. ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮುಖ್ಯಮಂತ್ರಿ ಪಳನಿಸ್ವಾಮಿ, ಬೆಳಗ್ಗೆ 6ರಿಂದ 9ರವರೆಗೆ ಹೋಟೆಲ್ ಓಪನ್ ಮಾಡಲು ಅನುಮತಿ ನೀಡಲಾಗಿದ್ದು, ಪಾರ್ಸೆಲ್ ಸೇವೆಗಳಿಗೆ ರಾತ್ರಿ 10ರವರೆಗೆ ಅವಕಾಶ ನೀಡಲಾಗಿದೆ ಎಂದಿದ್ದಾರೆ.
ಅಕ್ಟೋಬರ್ ಕೊನೆಯವರೆಗೆ ಲಾಕ್ಡೌನ್ ವಿಸ್ತರಣೆ ಮಾಡಿದ ತಮಿಳುನಾಡು! - ಲಾಕ್ಡೌನ್ ವಿಸ್ತರಣೆ ಮಾಡಿದ ತಮಿಳುನಾಡು
ಕೊರೊನಾ ಸೋಂಕಿತ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ತಮಿಳುನಾಡಿನಲ್ಲಿ ಅಕ್ಟೋಬರ್ ಕೊನೆಯವರೆಗೆ ಲಾಕ್ಡೌನ್ ವಿಸ್ತರಣೆ ಮಾಡಿ ಘೋಷಣೆ ಮಾಡಲಾಗಿದೆ.
Tamil Nadu CM
ಇದರ ಜತೆಗೆ 100 ಜನರೊಂದಿಗೆ ಸಿನಿಮಾ ಚಿತ್ರಿಕರಣಕ್ಕೆ ಅವಕಾಶ ನೀಡಲಾಗಿದ್ದು, ಚೆನ್ನೈ ವಿಮಾನ ನಿಲ್ದಾಣದ ವಿಮಾನಯಾನ ಸೇವೆ ಅಕ್ಟೋಬರ್ ಮೊದಲ ವಾರದಿಂದ ಮತ್ತಷ್ಟು ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
10,11 ಮತ್ತು 12ನೇ ತರಗತಿ ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ಶಿಕ್ಷಕರ ಮಾರ್ಗದರ್ಶನ ಪಡೆದುಕೊಳ್ಳಲು ಶಾಲೆಗೆ ಹೋಗಲು ಅವಕಾಶ ನೀಡಲಾಗಿದೆ. ಆದರೆ ಚಿತ್ರಮಂದಿರ, ಮನೋರಂಜನಾ ಉದ್ಯಾನಗಳು, ಈಜುಕೊಳ, ಕಡಲತೀರಗಳು ಬಂದ್ ಇರಲಿವೆ.ರಾಜ್ಯದಲ್ಲಿ ಸದ್ಯ 46,281 ಸಕ್ರಿಯ ಪ್ರಕರಣಗಳಿವೆ. ಇಂದು 5,546 ಕೊರೊನಾ ಸೋಂಕು ಪ್ರಕರಣ ದಾಖಲಾಗಿವೆ.