ಚೆನ್ನೈ (ತಮಿಳುನಾಡು):ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
ತಮ್ಮ ಕಚೇರಿ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಹೋಂ ಐಸೊಲೇಷನ್ನಲ್ಲಿದ್ದ ಅವರು ಅಳ್ವಾರ್ ಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರಿಗೆ ಸೋಂಕು ಪರೀಕ್ಷೆ ಮಾಡಲಾಗಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ.
ಸದ್ಯಕ್ಕೆ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗವರ್ನರ್ ಅವರು ಲಕ್ಷಣ ರಹಿತ ಸೋಂಕನ್ನು ಹೊಂದಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಕಾವೇರಿ ಆಸ್ಪತ್ರೆಯ ಮೂಲಗಳು ಸ್ಪಷ್ಟನೆ ನೀಡಿವೆ.