ಚೆನ್ನೈ:ತಮಿಳುನಾಡಿನಲ್ಲಿ ಲಾಕ್ಡೌನ್ ಜಾರಿಯಲ್ಲಿರುವವರೆಗೆ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದು. ಇದರಿಂದ ಹೆಚ್ಚು ಜನರಲ್ಲಿ ಕೋವಿಡ್ ಸೋಂಕು ಹರಡುವ ಸಾಧ್ಯತೆ ಇದೆ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಮದ್ಯದ ಅಂಗಡಿ ತೆರೆದಿರುವುದರಿಂದ ಸಾಮಾಜಿಕ ಅಂತರದ ಉಲ್ಲಂಘನೆಯಾಗುತ್ತಿದೆ. ಹಾಗಾಗಿ, ಅನ್ಲೈನ್ ಹಾಗೂ ಹೋಂ ಡಿಲಿವರಿ ಮಾಡಲು ಅವಕಾಶ ನೀಡಿ ಎಂದು ಸರ್ಕಾರಕ್ಕೆ ಆದೇಶಿಸಿತ್ತು.
ಮದ್ಯ ಮಾರಾಟ ಸಂಬಂಧ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ತಮಿಳುನಾಡು - ತಮಿಳುನಾಡಿನಲ್ಲಿ ಮದ್ಯದಂಗಡಿ ಓಪನ್
ತಮಿಳುನಾಡಿನಲ್ಲಿ ಮೇ 7ರಿಂದ ಮದ್ಯದ ಅಂಗಡಿ ಓಪನ್ ಆಗಿದ್ದು, ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಉಲ್ಲಂಘನೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಮದ್ರಾಸ್ ಹೈಕೋರ್ಟ್ ತಕ್ಷಣ ಬಂದ್ ಮಾಡುವಂತೆ ಆದೇಶ ಹೊರಹಾಕಿತ್ತು.
Suprem court
ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ತಾವು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ತಕ್ಷಣವೇ ನಡೆಸಬೇಕೆಂದು ಮನವಿ ಮಾಡಿದ್ದು, ಮದ್ರಾಸ್ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದೆ.
ಸೋಮವಾರ ಈ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.