ಅಮರಾವತಿ :ತಮಿಳುನಾಡಿನ ಜನರಿಗೆ ಜಗನ್ ಮೋಹನ್ ರೆಡ್ಡಿ ಅವರಂತಹ ಮುಖ್ಯಮಂತ್ರಿ ಬೇಕು ಎಂದು ಪುದುಚೇರಿ ಮಲ್ಲಾಡಿ ಕೃಷ್ಣ ರಾವ್ ಹೇಳಿದ್ದಾರೆ.
ಅಮರಾವತಿಯಲ್ಲಿ 139 ಜಾತಿಗಳ 728 ನಾಯಕರು ನಿರ್ದೇಶಕ ಮತ್ತು ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಅವರು, ತಮಿಳುನಾಡಿನ ಜನರಿಗೆ ಸಿಎಂ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರಂತಹ ಮುಖ್ಯಮಂತ್ರಿ ಬೇಕು ಎಂದ ಸಚಿವರು, ಆಂಧ್ರಪ್ರದೇಶದಲ್ಲಿ 56 ಹಿಂದುಳಿದ ವರ್ಗಗಳ ನಿಗಮಗಳನ್ನು ರಚಿಸುವ ಜಗನ್ ಅವರ ಕಾರ್ಯವನ್ನು ಶ್ಲಾಘಿಸಿದರು.