ನವದೆಹಲಿ: ಹಿರಿಯ ರಾಜತಾಂತ್ರಿಕ ತಾರಂಜಿತ್ ಸಿಂಗ್ ಸಂಧು ಅವರನ್ನು ಅಮೆರಿಕದ ಭಾರತೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಂಗಳವಾರ ತಿಳಿಸಿದೆ.
ಅಮೆರಿಕದ ಭಾರತೀಯ ರಾಯಭಾರಿಯಾಗಿ ತಾರಂಜಿತ್ ಸಿಂಗ್ ಸಂಧು ನೇಮಕ - ವಿದೇಶಾಂಗ ಸಚಿವಾಲಯದಿಂದ ಮಾಹಿತಿ ಅಮೆರಿಕದ ಭಾರತದ ರಾಯಭಾರಿಯಾಗಿ ತಾರಂಜಿತ್ ಸಿಂಗ್
ಹಿರಿಯ ರಾಜತಾಂತ್ರಿಕ ತಾರಂಜಿತ್ ಸಿಂಗ್ ಸಂಧು ಅವರನ್ನು ಅಮೆರಿಕದ ಭಾರತೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಇಂದು ತಿಳಿಸಿದೆ.
ತಾರಂಜಿತ್ ಸಿಂಗ್ ಸಂಧು
1988 ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವಾ ಅಧಿಕಾರಿಯಾಗಿದ್ದ ಸಂಧು ಅವರು ಶ್ರೀಲಂಕಾದಲ್ಲಿ ಭಾರತದ ಹೈಕಮಿಷನರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಈವರೆಗೆ ಅಮೆರಿಕದ ವಾಷಿಂಗ್ಟನ್ನಲ್ಲಿ ಭಾರತದ ರಾಯಭಾರಿ ಆಗಿ ಹರ್ಷವರ್ಧನ್ ಶ್ರೀಂಗ್ಲಾ ಕಾರ್ಯ ನಿರ್ವಹಿಸುತ್ತಿದ್ದರು.
ಶ್ರೀಂಗ್ಲಾರನ್ನು ಭಾರತದ ಮುಂದಿನ ವಿದೇಶಾಂಗ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.