ಅಮರಾವತಿ (ಆಂಧ್ರಪ್ರದೇಶ): ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಜ್ಯದ ಡಿಜಿಪಿ ದಾಮೋದರ್ ಗೌತಮ್ ಸಾವಂಗ್ ಅವರಿಗೆ ಪತ್ರ ಬರೆದಿದ್ದಾರೆ.
ಚಂದ್ರಬಾಬು ನಾಯ್ಡು ಬರೆದ ಪತ್ರದಲ್ಲಿ ಕೆಲ ಘಟನೆಗಳ ಕುರಿತು ಉಲ್ಲೇಖಿಸಲಾಗಿದೆ. "ಆಂಧ್ರಪ್ರದೇಶದಲ್ಲಿ ದುಷ್ಕರ್ಮಿಗಳ ಅಟ್ಟಹಾಸ ಮುಂದುವರೆಯುತ್ತಿದೆ. ನಕರೆಕಲ್ ಮತ್ತು ವೆಲಿಗೋಡು ಮಂಡಲದಲ್ಲಿ ರಕ್ಷಾ ಬಂಧನದ ದಿನವೇ ದುಷ್ಕರ್ಮಿಗಳು ಬುಡಕಟ್ಟು ಜನಾಂಗದ ಮಹಿಳೆಗೆ ಕಿರುಕುಳ ನೀಡಿ, ಅತ್ಯಾಚಾರ ಎಸೆಗಿ ಕೊಲೆ ಮಾಡಿದ್ದಾರೆ. ಇವಿಷ್ಟೇ ಅಲ್ಲದೇ, ಹಲವಾರು ಮೇಲ್ಮನವಿಗಳ ಹೊರತಾಗಿಯೂ, ಅಪರಾಧಿಗಳ ವಿರುದ್ಧ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ನಾಯ್ಡು ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.