ಅಮರಾವತಿ (ಆಂಧ್ರಪ್ರದೇಶ): ಪ್ರತಿ ಪಕ್ಷ ನಾಯಕರ ಫೋನ್ ಕರೆಗಳನ್ನ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಚಂದ್ರಬಾಬು ನಾಯ್ದು ಆರೋಪಿಸಿ ಪ್ರಧಾನ ಮಂತ್ರಿ ಮೋದಿಗೆೆ ಪತ್ರ ಬರೆದಿದ್ದಾರೆ.
ಫೋನ್ ಕದ್ದಾಲಿಕೆ: ಪ್ರಧಾನಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು
ರಾಜ್ಯದಲ್ಲಿ ಹಲವರ ಫೋನ್ ಟ್ಯಾಪಿಂಗ್ ಆಗುತ್ತಿದೆ ಎಂದು ಆರೋಪಿಸಿ ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ಹಲವು ನಾಯಕರ ಫೋನ್ ಕದ್ದಾಲಿಕೆ ಆರೋಪಿಸಿ ಪ್ರಧಾನಿಗೆ ಪತ್ರ ಬರೆದ ಚಂದ್ರಬಾಬು ನಾಯ್ದು
ಸಂವಿಧಾನದ ವೈಯಕ್ತಿಕ ಸ್ವಾತಂತ್ರ್ಯದ ಹಕ್ಕಿನಡಿ ಬರುವ ಆರ್ಟಿಕಲ್ 19 ಮತ್ತು 21ರ ಉಲ್ಲಂಘನೆ ಮಾಡಲಾಗುತ್ತಿದೆ. ಅವರ ವಿರುದ್ಧ ತನಿಖೆ ನಡೆಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಧ್ವನಿ ಎತ್ತುತಿರುವವರ ಸದ್ದಡಗಿಸಲಾಗುತ್ತಿದೆ. ಕಾನೂನು ಬಾಹಿರವಾಗಿ ಹಲವರ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ. ಅಲ್ಲದೇ ಈ ಕುರಿತು ತನಿಖೆ ನಡೆಸಿ ಕ್ರಮಕ್ಕೆ ಮುಂದಾಗುವಂತೆ ಈ ಮೂಲಕ ಮನವಿ ಮಾಡಿದ್ದಾರೆ.