ಕರ್ನಾಟಕ

karnataka

ETV Bharat / bharat

ಶಿಕ್ಷಕರು ಹೊಸ ಶಿಕ್ಷಣ ವಿಧಾನಗಳನ್ನು ಅಳವಡಿಸಿಕೊಂಡಿದ್ದಾರೆ: ಪ್ರಧಾನಿ ಮೋದಿ - ಶಿಕ್ಷಣದಲ್ಲಿ ತಂತ್ರಜ್ಞಾನದ ಗರಿಷ್ಠ ಬಳಕೆ

ಶಿಕ್ಷಣದಲ್ಲಿ ತಂತ್ರಜ್ಞಾನದ ಗರಿಷ್ಠ ಬಳಕೆಯನ್ನು ಹೇಗೆ ಸೇರಿಸಿಕೊಳ್ಳಬೇಕು, ಹೊಸ ವಿಧಾನಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಗೆ ಹೇಗೆ ಸಹಾಯ ಮಾಡಬೇಕು ಎಂಬುದನ್ನು ಶಿಕ್ಷಕರು ಕಲಿತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Teachers have adapted to new education methods
ಶಿಕ್ಷಕರು ಹೊಸ ಶಿಕ್ಷಣ ವಿಧಾನಗಳಿಗೆ ಹೊಂದಿಕೊಂಡಿದ್ದಾರೆ

By

Published : Aug 31, 2020, 7:32 AM IST

ನವದೆಹಲಿ: ಕೊರೊನಾ ವೈರಸ್ ಬಿಕ್ಕಟ್ಟಿನ ಮಧ್ಯೆ ಶಿಕ್ಷಕರು ಸವಾಲನ್ನು ಸ್ವೀಕರಿಸಿದ್ದಾರೆ. ಮಾತ್ರವಲ್ಲದೆ ಶಿಕ್ಷಣದಲ್ಲಿ ಹೊಸ ತಂತ್ರಜ್ಞಾನ ಮತ್ತು ವಿಧಾನಗಳನ್ನು ಬಳಸಿಕೊಂಡು ಅದನ್ನು ಅವಕಾಶವಾಗಿ ಪರಿವರ್ತಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.

"ನನ್ನ ಪ್ರೀತಿಯ ದೇಶ ವಾಸಿಗಳೇ, ಸೆಪ್ಟೆಂಬರ್ 5ರಂದು ನಾವು ಶಿಕ್ಷಕರ ದಿನವನ್ನು ಆಚರಿಸುತ್ತೇವೆ. ನಮ್ಮ ಜೀವಿತಾವಧಿಯಲ್ಲಿ ನಾವು ಗಳಿಸಿದ ಯಶಸ್ಸಿನ ಬಗ್ಗೆ ಯೋಚಿಸಿದಾಗಲೆಲ್ಲಾ ನಾವು ಯಾವಾಗಲೂ ಒಬ್ಬ ಶಿಕ್ಷಕ ಅಥವಾ ಇನ್ನೊಬ್ಬರನ್ನು ನೆನಪಿಸಿಕೊಳ್ಳುತ್ತೇವೆ. ಕೊರೊನಾ ಬಿಕ್ಕಟ್ಟಿನೊಂದಿಗೆ ಬದಲಾಗುತ್ತಿರುವ ಸಮಯ ನಮ್ಮ ಶಿಕ್ಷಕರಿಗೆ ಹೊಸ ಸವಾಲುಗಳನ್ನು ಒಡ್ಡುತ್ತಿದೆ. ನಮ್ಮ ಶಿಕ್ಷಕರು ಈ ಸವಾಲನ್ನು ಸ್ವೀಕರಿಸಿದ್ದಾರೆ. ಮಾತ್ರವಲ್ಲದೆ ಅದನ್ನು ಒಂದು ಅವಕಾಶವನ್ನಾಗಿ ಮಾಡಿಕೊಂಡಿರುವುದು ನನಗೆ ಸಂತೋಷವಾಗಿದೆ "ಎಂದು ಪ್ರಧಾನಿ ಮೋದಿ ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಶಿಕ್ಷಣದಲ್ಲಿ ತಂತ್ರಜ್ಞಾನದ ಗರಿಷ್ಠ ಬಳಕೆಯನ್ನು ಹೇಗೆ ಸೇರಿಸಿಕೊಳ್ಳಬೇಕು, ಹೊಸ ವಿಧಾನಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳಿಗೆ ಹೇಗೆ ಸಹಾಯ ಮಾಡಬೇಕು ಎಂಬುದನ್ನು ಶಿಕ್ಷಕರು ಕಲಿತಿದ್ದಾರೆ ಎಂದು ಹೇಳಿದರು.

"ನಮ್ಮ ಶಿಕ್ಷಕರು ಇದನ್ನು ಸ್ವಾಭಾವಿಕವಾಗಿ ಅಳವಡಿಸಿಕೊಂಡಿದ್ದಾರೆ ಮತ್ತು ಅವರ ವಿದ್ಯಾರ್ಥಿಗಳಿಗೆ ಸಹ ಅದನ್ನು ಕಲಿಸಿದ್ದಾರೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಒಟ್ಟಾಗಿ ಹೊಸ ಹೆಜ್ಜೆ ಇರಿಸಿದ್ದಾರೆ" ಎಂದು ಹೇಳಿದರು.

ABOUT THE AUTHOR

...view details