ಹೈದರಾಬಾದ್: ಮಹಾಮಾರಿ ಕೊರೊನಾ ವಿರುದ್ಧ ಏಕತಾ ದೀಪ ಹಚ್ಚಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರ ಬೆನ್ನಲ್ಲೇ ನಿನ್ನೆ ರಾತ್ರಿ ಎಲ್ಲರೂ ದೀಪ ಹಚ್ಚುವ ಮೂಲಕ ಪ್ರಧಾನಿ ಕರೆಗೆ ಸಾಥ್ ನೀಡಿದರು.
'ಚೀನಾ ವೈರಸ್ ಗೋ ಬ್ಯಾಕ್': ಹತ್ತಾರು ಕಾರ್ಯಕರ್ತರೊಂದಿಗೆ ಬಿಜೆಪಿ ಶಾಸಕನ ಎಡವಟ್ಟು!
ಪ್ರಧಾನಿ ಮೋದಿ ಕರೆಗೆ ನಿನ್ನೆ ರಾತ್ರಿ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿ ಶಾಸಕನೊಬ್ಬ ಎಡವಟ್ಟು ಮಾಡಿಕೊಂಡಿದ್ದಾರೆ.
ತೆಲಂಗಾಣ ಬಿಜೆಪಿ ಶಾಸಕ ರಾಜ್ಸಿಂಗ್ ಕೂಡ ಪ್ರಧಾನಿ ಮೋದಿಯವರ ಕರೆಗೆ ಸಾಥ್ ನೀಡಿದ್ದು, ಈ ವೇಳೆ ಅವರ ಎಡವಟ್ಟು ಮಾಡಿಕೊಂಡಿದ್ದಾರೆ. ದೀಪ ಕೈಯಲ್ಲಿ ಹಿಡಿದು ಹತ್ತಾರು ಬಿಜೆಪಿ ಕಾರ್ಯಕರ್ತರೊಂದಿಗೆ ಬೀದಿಗೆ ಇಳಿದಿರುವ ಶಾಸಕ, ಚೀನಾ ವೈರಸ್ ಗೋ ಬ್ಯಾಕ್ ಎಂದು ಘೋಷಣೆ ಕೂಗಿದ್ದಾರೆ.
ಈ ವೇಳೆ ಅವರೊಂದಿಗೆ ಸೇರಿದ್ದ ಕೆಲವರು ಮಾಸ್ಕ್ ಹಾಕಿಕೊಂಡಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಈ ಶಾಸಕ ವಿಫಲವಾಗಿದ್ದು, ಇದೀಗ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಸದಾ ಒಂದಿಲ್ಲೊಂದು ರೀತಿಯಲ್ಲಿ ವಿವಾದ ಮೈಮೇಲೆ ಎಳೆದುಕೊಳ್ಳುವ ಈ ಶಾಸಕ ಹೈದರಾಬಾದ್ನ ಗೋಸ್ಮಹಲ್ ಕ್ಷೇತ್ರದಿಂದ ಕಣಕ್ಕಿಳಿದು ಜಯ ಸಾಧಿಸಿದ್ದಾರೆ.