ತೆಲಂಗಾಣ:ಪೂರ್ವ ಲಡಾಖ್ನಲ್ಲಿ ಚೀನಾ ಯೋಧರ ದಾಳಿಯಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಬಾಬು ಮನೆಗೆ ಇಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಭೇಟಿ ನೀಡಿದರು.
ಕಳೆದ ಕೆಲ ದಿನಗಳ ಹಿಂದೆ ಹುತಾತ್ಮ ಯೋಧ ಸಂತೋಷ್ ಬಾಬು ಕುಟುಂಬಕ್ಕೆ 5 ಕೋಟಿ ರೂ. ಪರಿಹಾರ ನೀಡಲಾಗುತ್ತಿದ್ದು, ಉಳಿದ ಯೋಧರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಘೋಷಿಸಿದ್ದರು. ಜತೆಗೆ ಸಂತೋಷ್ ಬಾಬು ಅವರ ಕುಟುಂಬಕ್ಕೆ ನಿವಾಸ ಹಾಗೂ ಸಂತೋಷ್ ಅವರ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದು, ಹುತಾತ್ಮ ಯೋಧನ ಮನೆಗೆ ಸ್ವತಃ ತೆರಳಿ ಪರಿಹಾರ ನೀಡುವುದಾಗಿ ತಿಳಿಸಿದ್ದರು.