ಹೈದರಾಬಾದ್: ತೆಲಂಗಾಣದಲ್ಲಿ ಸುರಿದ ಮಳೆಯ ಆರ್ಭಟಕ್ಕೆ ಇಲ್ಲಿಯವರೆಗೆ 50 ಜನರು ಸಾವನ್ನಪ್ಪಿದ್ದು, 6,000 ಕೋಟಿ ರೂ. ನಷ್ಟವಾಗಿದೆ ಎಂದು ತಿಳಿದು ಬಂದಿದೆ. ಇಂದು ವಿವಿಧ ಜಿಲ್ಲೆಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮಹತ್ವದ ಸಭೆ ನಡೆಸಿದರು.
ಇದರ ಜತೆಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳಿಗಾಗಿ 1,350 ಕೋಟಿ ರೂ. ತಕ್ಷಣ ಬಿಡುಗಡೆ ಮಾಡುವಂತೆ ಸಿಎಂ ಮನವಿ ಮಾಡಿದ್ದಾರೆ. ಮಹಾಮಳೆಗೆ ರಸ್ತೆ ಸಂಪೂರ್ಣವಾಗಿ ಕೊಚ್ಚಿ ಹೋಗಿವೆ. ಇನ್ನು ಒಂದೇ ಕುಟುಂಬದ ಒಂಬತ್ತು ಸದಸ್ಯರು ಸಾವನ್ನಪ್ಪಿದ್ದಾರೆ. ಈಗಾಗಲೇ ಮೂರು ಮೃತದೇಹ ಹೊರತೆಗೆಯಲಾಗಿದ್ದು, ಐವರಿಗಾಗಿ ಶೋಧಕಾರ್ಯ ನಡೆಯುತ್ತಿದೆ.