ಹೈದರಾಬಾದ್:ತೆಲಂಗಾಣದಲ್ಲಿ ಶನಿವಾರ ಕೇವಲ 7 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವುದು ಕಂಡುಬಂದಿದೆ.
ತೆಲಂಗಾಣದಲ್ಲಿ ತಗ್ಗುತ್ತಿದೆ ಕೊರೊನಾ... ಶನಿವಾರ ಸೋಂಕಿತರಿಗಿಂತ ಬಿಡುಗಡೆಯಾದವರೇ ಹೆಚ್ಚು - ತೆಲಂಗಾಣದಲ್ಲಿ ಕಡಿಮೆಯಾಗುತ್ತಿದೆ ಕೊರೊನಾ
ತೆಲಂಗಾಣದಲ್ಲಿ ಶನಿವಾರ 7 ಜನರಲ್ಲಿ ಸೋಂಕು ಪತ್ತೆಯಾದರೆ, 16 ಮಂದಿ ಗುಣಮುಖರಾಗಿ ಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಶನಿವಾರ 7 ಜನರಲ್ಲಿ ಕೊರೊನಾ ಸೋಂಕು ಕಂಡುಬಂದಿದ್ದು, 16 ಮಂದಿ ಗುಣಮುಖರಾಗಿದ್ದಾರೆ. 7ರಲ್ಲಿ ಆರು ಸೋಂಕಿತರು ಹೈದರಾಬಾದ್ ಮೂಲದವರಾಗಿದ್ದು, ಒಂದು ಪ್ರಕರಣ ವಾರಂಗಲ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಏಳು ಹೊಸ ಪ್ರಕರಣಗಳೊಂದಿಗೆ ತೆಲಂಗಾಣದಲ್ಲಿ ಸೋಂಕಿತರ ಸಂಖ್ಯೆ 990 ಕ್ಕೆ ಏರಿದೆ. ಶನಿವಾರ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಪ್ರಸ್ತುತ 658 ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟು 25 ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ 2 ದಿನಗಳ ಹಿಂದೆ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ್ದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಲಾಕ್ಡೌನ್ ಜಾರಿಗೆ ತರಲಾಗಿದ್ದು, ಶೀಘ್ರದಲ್ಲೇ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲಿದೆ ಎಂದಿದ್ದರು.