ಕರ್ನಾಟಕ

karnataka

ETV Bharat / bharat

ತೆಲಂಗಾಣದಲ್ಲಿರುವ ವಲಸೆ ಕಾರ್ಮಿಕರಿಗಾಗಿ ಇಂದಿನಿಂದ ವಿಶೇಷ ರೈಲು ಸೇವೆ

ತೆಲಂಗಾಣದಲ್ಲಿ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರ ರಾಜ್ಯಗಳಿಗೆ ಕಳುಹಿಸಲು ಇಂದಿನಿಂದ ಒಂದು ವಾರ ದಿನಕ್ಕೆ 40 ವಿಶೇಷ ರೈಲುಗಳನ್ನು ನಿಯೋಜಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

kcr
kcr

By

Published : May 5, 2020, 11:06 AM IST

ಹೈದರಾಬಾದ್ (ತೆಲಂಗಾಣ):ವಲಸೆ ಕಾರ್ಮಿಕರನ್ನು ಅವರ ರಾಜ್ಯಗಳಿಗೆ ವಾಪಸ್ ಕಳುಹಿಸಲು ಮುಂದಿನ ಒಂದು ವಾರದಲ್ಲಿ ಪ್ರತಿದಿನ 40 ವಿಶೇಷ ರೈಲು ಸೇವೆ ಒದಗಿಸಲಾಗುವುದು ಎಂದು ತೆಲಂಗಾಣ ಸರ್ಕಾರ ಪ್ರಕಟಿಸಿದೆ.

ಹೈದರಾಬಾದ್, ವರಂಗಲ್, ಖಮ್ಮಮ್, ರಾಮಗುಂಡಮ್, ದಮರಾಚಾರ್ಲಾ ಮತ್ತು ಇತರ ಸ್ಥಳಗಳಿಂದ ಬಿಹಾರ, ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಇತರ ರಾಜ್ಯಗಳಿಗೆ ರೈಲುಗಳನ್ನು ಓಡಿಸಲಾಗುವುದು ಎಂದು ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಹೇಳಿದ್ದಾರೆ.

ಲಾಕ್​ ಡೌನ್​ನಿಂದಾಗಿ ರಾಜ್ಯದ ವಲಸೆ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕೆಸಿಆರ್ ಪರಿಶೀಲನಾ ಸಭೆ ನಡೆಸಿದರು. ವೈದ್ಯಕೀಯ ಮತ್ತು ಆರೋಗ್ಯ ಸಚಿವ ಎಟೆಲಾ ರಾಜೇಂದರ್, ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್, ಪೊಲೀಸ್ ಮಹಾನಿರ್ದೇಶಕ ಮಹೇಂದರ್ ರೆಡ್ಡಿ ಮತ್ತು ಇತರರು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ವಲಸೆ ಕಾರ್ಮಿಕರಿಗಾಗಿ ವಿಶೇಷ ರೈಲುಗಳ ವ್ಯವಸ್ಥೆ ಮಾಡುವ ನಿರ್ಧಾರ ಕೈಗೊಳ್ಳಲಾಯಿತು.

ತಮ್ಮ ಊರುಗಳಿಗೆ ತೆರಳಲು ವಲಸೆ ಕಾರ್ಮಿಕರು ಈಗಾಗಲೇ ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಪೊಲೀಸ್ ಠಾಣೆಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡ ವಲಸೆ ಕಾರ್ಮಿಕರಿಗೆ ವಿಶೇಷ ರೈಲುಗಳಲ್ಲಿ ಪ್ರಯಾಣಿಸಲು ಅವಕಾಶವಿರುತ್ತದೆ. ಪ್ರಯಾಣದ ವಿವರಗಳನ್ನು ಪೊಲೀಸ್ ಠಾಣೆಗಳಲ್ಲಿ ನೀಡಲಾಗುವುದು ಎಂದು ಕೆಸಿಆರ್ ಹೇಳಿದರು.

ABOUT THE AUTHOR

...view details