ಹೈದರಾಬಾದ್: ಕಳೆದ ಮೂರು ತಿಂಗಳಲ್ಲಿ ರಾಜ್ಯದಲ್ಲಿ 204 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿವೆ ಎಂದು ತೆಲಂಗಾಣ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ (ಟಿಎಸ್‌ಸಿಪಿಸಿಆರ್) ತಿಳಿಸಿದೆ.
ಲಾಕ್ ಡೌನ್ ಅವಧಿಯಲ್ಲೇ 204 ಬಾಲ್ಯ ವಿವಾಹ ಪ್ರಕರಣಗಳಿಗೆ ಸಾಕ್ಷಿಯಾದ ತೆಲಂಗಾಣ! - ತೆಲಂಗಾಣದಲ್ಲಿ ಬಾಲ್ಯ ವಿವಾಹ
ಕೋವಿಡ್ ಲಾಕ್ ಡೌನ್ ಅವಧಿಯಲ್ಲಿ ಮಾರ್ಚ್ 24 ರಿಂದ ಮೇ 31 ರವರೆಗೆ ಒಟ್ಟು 204 ಬಾಲ್ಯ ವಿವಾಹಗಳು ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತೆಲಂಗಾಣ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ಹೇಳಿದೆ.
![ಲಾಕ್ ಡೌನ್ ಅವಧಿಯಲ್ಲೇ 204 ಬಾಲ್ಯ ವಿವಾಹ ಪ್ರಕರಣಗಳಿಗೆ ಸಾಕ್ಷಿಯಾದ ತೆಲಂಗಾಣ! Telangana witnesses 204 child marriages during lockdown](https://etvbharatimages.akamaized.net/etvbharat/prod-images/768-512-7798013-150-7798013-1593312133522.jpg)
ಈ ಸಂಬಂಧ ಬಾಲ್ಯ ವಿವಾಹ ತಡೆ ಕಾಯ್ದೆ 2006 ರಡಿ ತ್ವರಿತವಾಗಿ ಕ್ರಮಕೈಗೊಳ್ಳಲು ಮತ್ತು ಜನರನ್ನು ಜಾಗೃತಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ನ್ಯಾಯಾಧೀಶರಿಗೆ ಸೂಚಿಸಲಾಗಿದೆ ಎಂದು ಟಿಎಸ್‌ಸಿಪಿಆರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೋವಿಡ್ ಲಾಕ್ ಡೌನ್ ಅವಧಿಯಲ್ಲಿ ಮಾರ್ಚ್ 24 ರಿಂದ ಮೇ 31 ರವರೆಗೆ ಒಟ್ಟು 204 ಬಾಲ್ಯ ವಿವಾಹಗಳು ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಬಾಲ್ಯ ವಿವಾಹಗಳು ಹೆಣ್ಣು ಮಕ್ಕಳ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಬಾಲ್ಯ ವಿವಾಹಗಳಿಂದ ಹೆಣ್ಣು ಮಕ್ಕಳನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇಲ್ಲದಿದ್ದರೆ ಅದು ಅವರ ಜೀವನ ಪೂರ್ತಿ ದುಷ್ಪರಿಣಾಮ ಬೀರುತ್ತದೆ. ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಡ್ಡಿಯಾಗಲಿದೆ ಎಂದು ಆಯೋಗ ಹೇಳಿದೆ.