ಹೈದರಾಬಾದ್: ಇತ್ತೀಚೆಗೆ ಲಂಡನ್‌ನ ಮೈಂಡ್ ಸ್ಪೋರ್ಟ್ಸ್ ಒಲಿಂಪಿಯಾಡ್ (ಎಂಎಸ್‌ಒ)ನಲ್ಲಿ ನಡೆದ ಮಾನಸಿಕ ಲೆಕ್ಕಾಚಾರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಪ್ರಥಮ ಬಾರಿಗೆ ಚಿನ್ನ ಗೆದ್ದ ಹೈದರಾಬಾದ್‌ನ 20 ವರ್ಷದ ನೀಲಕಂಠ ಭಾನು ಪ್ರಕಾಶ್ ವಿಶ್ವದ ಅತಿ ವೇಗದ ಮಾನವ ಕ್ಯಾಲ್ಕುಲೇಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದ ಸೇಂಟ್ ಸ್ಟೀಫನ್ ಕಾಲೇಜಿನಲ್ಲಿ ಗಣಿತ (ಗೌರವ) ವಿದ್ಯಾರ್ಥಿಯಾಗಿರುವ ಇವರು, ವಿಶ್ವದ ಅತಿ ವೇಗದ ಮಾನವ ಕ್ಯಾಲ್ಕುಲೇಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿ ವಿಶ್ವ ದಾಖಲೆಗಳನ್ನು ಮತ್ತು 50 ಲಿಮ್ಕಾ ದಾಖಲೆಗಳನ್ನು ಹೊಂದಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ನಾನು ವಿಶ್ವದ ಅತಿ ವೇಗದ ಮಾನವ ಕ್ಯಾಲ್ಕುಲೇಟರ್ ಎಂಬ ಕಾರಣಕ್ಕಾಗಿ 4 ವಿಶ್ವ ದಾಖಲೆಗಳು ಮತ್ತು 50 ಲಿಮ್ಕಾ ದಾಖಲೆಗಳನ್ನು ಹೊಂದಿದ್ದೇನೆ. ನನ್ನ ಮೆದುಳು ಕ್ಯಾಲ್ಕುಲೇಟರ್ ವೇಗಕ್ಕಿಂತ ವೇಗವಾಗಿ ಲೆಕ್ಕಾಚಾರ ಮಾಡುತ್ತದೆ. ಈ ದಾಖಲೆಗಳನ್ನು ಮುರಿಯುವ ಸಾಹಸ ಸ್ಕಾಟ್ ಫ್ಲಾನ್ಸ್‌ಬರ್ಗ್ ಮತ್ತು ಶಕುಂತಲಾ ದೇವಿಯಂತಹ ಗಣಿತ ತಜ್ಞರ ಬಳಿ ಇತ್ತು. ಗಣಿತದ ವಿಷಯದಲ್ಲಿ ಭಾರತವನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲು ಸಾಕಷ್ಟು ಪ್ರಯತ್ನ ಮಾಡಿದ್ದೇನೆ " ಎಂದರು.