ಸಾಂಗ್ಲಿ(ಮಹಾರಾಷ್ಟ್ರ): ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆಗೆ ತೆರಳಿದ್ದ ರಕ್ಷಣಾ ಬೋಟ್ ಮುಳುಗಿದ ಪರಿಣಾಮ ಹತ್ತು ಮಂದಿ ಮೃತಪಟ್ಟ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ.
ಬ್ರಹ್ಮನಲ್ ಗ್ರಾಮದಲ್ಲಿ ದುರಂತ ಸಂಭವಿಸಿದ್ದು, ಖಾಸಗಿ ರಕ್ಷಣಾ ಬೋಟ್ ಸುಮಾರು 30ರಿಂದ 32 ಜನರನ್ನು ರಕ್ಷಿಸಿ ಹಿಂದಿರುಗುತ್ತಿದ್ದ ವೇಳೆ ಬೋಟ್ ಮಗುಚಿದೆ.
ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರ ಐದು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
ಮಹಾರಾಷ್ಟ್ರದಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಈವರೆಗೆ 16 ಮಂದಿ ಸಾವನ್ನಪ್ಪಿದ್ದಾರೆ. ಒಂದೂವರೆ ಲಕ್ಷಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ನಿರಂತರ ವರ್ಷಧಾರೆಗೆ ಕೊಲ್ಲಾಪುರ ಹಾಗೂ ಸಾಂಗ್ಲಿ ಜಿಲ್ಲೆಗಳು ಅತೀ ಹೆಚ್ಚು ಬಾಧಿತವಾಗಿವೆ.