ಪೂಂಚ್ (ಜಮ್ಮು ಮತ್ತು ಕಾಶ್ಮೀರ): ಪೂಂಚ್ನಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ವಿಶೇಷ ಪೊಲೀಸ್ ಪಡೆ ಜಂಟಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಕಾಶ್ಮೀರದಲ್ಲಿ ಬೆಳ್ಳಂಬೆಳಗ್ಗೆ ಸೇನಾ ಕಾರ್ಯಾಚರಣೆ: ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ - arms and ammunition recovered in Poonch
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಮಂಗ್ನಾರ್ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗು ತಾಣದ ಮೇಲೆ ದಾಳಿ ನಡೆಸಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಮಂಗ್ನಾರ್ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗು ತಾಣದ ಮೇಲೆ ದಾಳಿ ನಡೆಸಿದೆ. ಈ ಅಡಗುತಾಣದಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.
ಖಚಿತ ಮಾಹಿತಿ ಮೆರೆಗೆ ಈ ದಾಳಿ ನಡೆಸಿದ್ದೇವೆ ಎಂದು ಪೂಂಚ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಆಂಗ್ರಾಲ್ ಹೇಳಿದ್ದಾರೆ.