ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಓರ್ವ ಉಗ್ರನ ಹತ್ಯೆ - ಉಗ್ರ ಹತ
ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಚರಾರ್-ಐ-ಶರೀಫ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಉಗ್ರನೋರ್ವ ಹತನಾಗಿದ್ದಾನೆ.
ಜಮ್ಮು-ಕಾಶ್ಮೀರ ಎನ್ಕೌಂಟರ್
ಬುಡ್ಗಾಮ್ನ ಚರಾರ್-ಐ-ಶರೀಫ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಉಗ್ರನೋರ್ವನನ್ನು ಹೊಡೆದುರುಳಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.