ಕಿಶ್ತವಾರ್ : ಕಾಶ್ಮೀರ ಕಣಿವೆಯಲ್ಲಿ ಉಗ್ರರು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದಾರೆ. ಆರ್ಎಸ್ಎಸ್ ನಾಯಕ ಚಂದ್ರಕಾಂತ್ ಶರ್ಮಾ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಚಂದ್ರಕಾಂತ್ ಶರ್ಮಾ ಅವರ ಸೆಕ್ಯೂರಿಟಿ ಗಾರ್ಡ್ ಹತ್ಯೆಯಾಗಿದ್ದಾರೆ.
ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಆರ್ಎಸ್ಎಸ್ ನಾಯಕನ ಮೇಲೆ ದಾಳಿ, ಒಬ್ಬನ ಹತ್ಯೆ
ಆರ್ಎಸ್ಎಸ್ ನಾಯಕನ ಮೇಲೆ ಉಗ್ರರು ದಾಳಿ ನಡೆಸಿ ಅಟ್ಟಹಾಸ ಮೆರೆದಿರುವ ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ.
ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ
ಘಟನೆಯಲ್ಲಿ ಶರ್ಮಾ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಆಸ್ಪತ್ರೆಯಲ್ಲಿ ಮೆಡಿಕಲ್ ಅಸಿಸ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಆಗುಂತಕನೊಬ್ಬ ಗನ್ ಹಿಡಿದುಕೊಂಡು ಆಸ್ಪತ್ರೆಗೆ ನುಗ್ಗಿ ಶರ್ಮಾ ಹಾಗೂ ಅವರ ಗಾರ್ಡ್ ಮೇಲೆ ಗುಂಡು ಹಾರಿಸಿದ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷವೂ ಕಿಶ್ತವಾರ್ ದಲ್ಲಿ ಇಂತಹುದೇ ದಾಳಿ ನಡೆದಿತ್ತು.