ನವದೆಹಲಿ:ಭಾರತ 73 ಸ್ವಾತಂತ್ರ್ಯ ದಿನಾಚರಣೆ ಸಜ್ಜಾಗುತ್ತಿರುವ ಬೆನ್ನಲ್ಲೇ ದೇಶದಲ್ಲಿ ಉಗ್ರದಾಳಿಯ ಕರಿಛಾಯೆಯೂ ಆವರಿಸಿದೆ.
ಗುಪ್ತಚರ ಇಲಾಖೆಯ ಹೊಸ ಮಾಹಿತಿ ಪ್ರಕಾರ ಉಗ್ರರು ಗುಜರಾತ್ನ ಕಚ್ ಪ್ರಾಂತ್ಯದ ಮೂಲಕ ಭಾರತವನ್ನು ಪ್ರವೇಶಿಸಿ ವಿಧ್ವಂಸಕ ಕೃತ್ಯ ಎಸಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಗುಪ್ತಚರ ಇಲಾಖೆಯ ಮಾಹಿತಿಯ ಬಳಿಕ ಮತ್ತಷ್ಟು ಚುರುಕಾಗಿರುವ ಗುಜರಾತ್ ಪೊಲೀಸರು ಭದ್ರತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಯಾವುದೇ ರೀತಿಯ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣವೇ ತಿಳಿಸುವಂತೆ ಸ್ಥಳೀಯರಿಗೆ ಪೊಲೀಸರು ಹೇಳಿದ್ದಾರೆ.
ಕಾಶ್ಮೀರದ ವಿಚಾರದಲ್ಲಿ ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರದ ಬಳಿಕ ಉಗ್ರದಾಳಿಯ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಸುತ್ತಲೇ ಬಂದಿದೆ. ಈ ನಿಟ್ಟಿನಲ್ಲಿ ದೇಶದ ಕರಾವಳಿ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.