ನವದೆಹಲಿ:ಪೌರತ್ವ ತಿದ್ದುಪಡೆ ಕಾಯ್ದೆಯ ಬಗ್ಗೆ ವದಂತಿಗಳನ್ನು ಹಬ್ಬಿಸಲಾಗ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ಕಾಂಗ್ರೆಸ್, ಟಿಎಂಸಿ ಮತ್ತು ಕಮ್ಯುನಿಸ್ಟ್ ಪಕ್ಷದ ವಿರುದ್ಧ ಪ್ರತಿಭಟನೆ ನಡೆಸಲು ಭಾರತೀಯ ಜನತಾ ಪಕ್ಷ ನಿರ್ಧರಿಸಿದೆ. ಈ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಪೌರತ್ವ ತಿದ್ದುಪಡೆ ಕಾಯ್ದೆಯ ಬಗ್ಗೆ ವದಂತಿ... ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆಗೆ ನಿರ್ಧಾರ - ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್
ಪೌರತ್ವ ತಿದ್ದುಪಡೆ ಕಾಯ್ದೆಯ ಬಗ್ಗೆ ವದಂತಿಗಳನ್ನು ಹಬ್ಬಿಸಿದ್ದಕ್ಕಾಗಿ ಕಾಂಗ್ರೆಸ್, ಟಿಎಂಸಿ ಮತ್ತು ಕಮ್ಯುನಿಸ್ಟ್ ಪಕ್ಷದ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.
ಬಿಜೆಪಿ ಪಕ್ಷದ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಕೇರಳ ಮತ್ತು ಪಂಜಾಬ್‌ನಲ್ಲಿ ಪ್ರತಿಭಟನೆ ನಡೆಯಲಿದ್ದು, ಪಕ್ಷದ ಕಾರ್ಯಕಾರಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಿರ್ದೇಶನದಂತೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.
ಈಗಾಗಲೇ ಈ ರಾಜ್ಯಗಳಿಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪತ್ರ ಬರೆದಿದ್ದಾರೆ. ಈ ಎಲ್ಲಾ ರಾಜ್ಯಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಯಲಿದೆ.