ಗಾಜಿಯಾಬಾದ್:ಮದುವೆಯಾಗಿ ಕೇವಲ ನಾಲ್ಕು ದಿನದಲ್ಲಿ ನವಜೋಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದ ವಿಶಾಲ್ ಹಾಗೂ ನಿಶಾ ನಾಲ್ಕು ದಿನಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಮದುವೆಯಾದ ಮರು ದಿನವೇ ಬೆಳಗ್ಗೆ ವಿಶಾಲ್ ಮೃತದೇಹ ರೈಲ್ವೆ ಹಳಿ ಮೇಲೆ ಪತ್ತೆಯಾಗಿದೆ. ಕೌಟುಂಬಿಕ ತೊಂದರೆಯಿಂದ ಈತ ಸೂಸೈಡ್ ಮಾಡಿಕೊಂಡಿದ್ದಾನೆಂದು ಹೇಳಲಾಗುತ್ತಿದೆ. ಗಂಡ ಸಾವನ್ನಪ್ಪಿದ ಖಿನ್ನತೆಯಲ್ಲೇ ನಿಶಾ ಕೂಡ ಮೂರು ದಿನದ ಬಳಿಕ ರಾತ್ರಿ ಮನೆಯಲ್ಲಿನ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇವರಿಬ್ಬರ ಸಾವಿಗೆ ಇಲ್ಲಿಯವರೆಗೆ ಯಾವುದೇ ರೀತಿಯ ಖಚಿತ ಕಾರಣ ತಿಳಿದು ಬಂದಿಲ್ಲ.