ಹೈದರಾಬಾದ್: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಪಶು ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ತೆಲಂಗಾಣ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.
ಟ್ವಿಟರ್ನಲ್ಲಿ ಈ ವಿಷಯ ಟಾಪ್ ಟ್ರೆಂಡಿಂಗ್ನಲ್ಲಿದ್ದು, ಎನ್ಕೌಂಟರ್ ಹಿಂದಿನ ಅಧಿಕಾರಿ ಬಗ್ಗೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಸೈಬರಾಬಾದ್ ಪೊಲೀಸ್ ಕಮಿಷನರ್ ವಿಶ್ವನಾಥ್ ಸಜ್ಜನರ್ ಅವರು ಈ ಎನ್ಕೌಂಟರ್ ಹಿಂದಿನ ವ್ಯಕ್ತಿ ಎಂದೇ ಹೇಳಲಾಗುತ್ತಿದೆ.
ದೇಶಾದ್ಯಂತ ವೈದ್ಯೆ ಹತ್ಯೆ ಪ್ರಕರಣ ಖಂಡಿಸಿ ಪ್ರತಿಭಟನೆ ಕಾವು ಹೆಚ್ಚಾಗಿತ್ತು, ಆರೋಪಿಗಳನ್ನು ತಕ್ಷಣವೇ ಗಲ್ಲಿಗೇರಿಸುವಂತೆ ಒತ್ತಾಯ ಕೇಳಿಬರುತ್ತಿತ್ತು. ತೆಲಂಗಾಣ ಸರ್ಕಾರದ ಮೇಲೆ ಒತ್ತಡ ಕೂಡ ಹೆಚ್ಚಾಗಿತ್ತು. ಇದಕ್ಕೆ ಪೂರಕ ಎಂಬಂತೆ ಪ್ರಕರಣದ ವಿಚಾರಣೆಗಾಗಿ ಆರೋಪಿಗಳನ್ನು ಹತ್ಯೆ ನಡೆದ ಜಾಗಕ್ಕೆ ಕರೆದೊಯ್ಯಲಾಗಿತ್ತು.
ಎನ್ಕೌಂಟರ್ ಮಾಡಿದ ಕಮಿಷನರ್ ವಿಶ್ವನಾಥ್ ಸಜ್ಜನರ್ ಅವರಿಗೆ ಪ್ರಶಂಸೆ ವ್ಯಕ್ತವಾಗುತ್ತಿದೆ.