ನವದೆಹಲಿ: ಜನವರಿ 26 ರಂದು ತ್ರಿವರ್ಣ ಧ್ವಜಕ್ಕೆ ಆದ ಅವಮಾನದಿಂದ ಇಡೀ ದೇಶಕ್ಕೆ ನೋವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದಿನ ಮನ್-ಕಿ-ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಹೇಳಿದ್ದರು.
ತ್ರಿವರ್ಣ ಧ್ವಜ ವಿಚಾರದಲ್ಲಿ ಪ್ರಧಾನಿ ಮೊಸಳೆ ಕಣ್ಣೀರು: ದಿಗ್ವಿಜಯ್ ಸಿಂಗ್ - ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್
ತ್ರಿವರ್ಣ ಧ್ವಜ ವಿಚಾರವಾಗಿ ಪ್ರಧಾನಿ ಮೋದಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಸ್ವಾತಂತ್ರ್ಯ ಬಳಿಕ ರಾಷ್ಟ್ರ ಧ್ವಜವನ್ನು ಹಾರಿಸಲು ನಿರಾಕರಿಸಿದ ಆರ್ಎಸ್ಎಸ್ನೊಂದಿಗೆ ಸಂಬಂಧ ಹೊಂದಿದ್ದೀರಿ, ಆದರೂ, ಯಾಕೆ ನೀವು ಆಘಾತಕ್ಕೊಳಗಾಗಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಪ್ರಶ್ನಿಸಿದ್ದಾರೆ.

ದಿಗ್ವಿಜಯ್ ಸಿಂಗ್
ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ತ್ರಿವರ್ಣ ಧ್ವಜ ವಿಚಾರವಾಗಿ ಪ್ರಧಾನಿ ಮೋದಿಯವರು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಸ್ವಾತಂತ್ರ್ಯ ಬಳಿಕ ರಾಷ್ಟ್ರ ಧ್ವಜವನ್ನು ಹಾರಿಸಲು ನಿರಾಕರಿಸಿದ ಆರ್ಎಸ್ಎಸ್ನೊಂದಿಗೆ ಸಂಬಂಧ ಹೊಂದಿದ್ದೀರಿ, ಆದರೂ, ಯಾಕೆ ನೀವು ಆಘಾತಕ್ಕೊಳಗಾಗಿಲ್ಲ ಎಂದು ಟ್ವಿಟ್ಟರ್ನಲ್ಲಿ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ತ್ರಿವರ್ಣ ಧ್ವಜಕ್ಕಾದ ಅವಮಾನದಿಂದ ಇಡೀ ರಾಷ್ಟ್ರಕ್ಕೆ ನೋವಾಗಿದೆ: 'ಮನ್ ಕಿ ಬಾತ್'ನಲ್ಲಿ ಮೋದಿ